Kodagu

ಶಾಂತಳ್ಳಿಯಲ್ಲಿ ಸೆಸ್ಕ್ ಸೆಕ್ಷನ್ ಕಚೇರಿ ನಿರ್ಮಾಣಕ್ಕೆ ಭೂಮಿಪೂಜೆ ನೆರವೇರಿಸಿದ ಶಾಸಕ ಡಾ.ಮಂತರ್ ಗೌಡ

admincoorgdaily

ಶಾಂತಳ್ಳಿಯಲ್ಲಿ ಸೆಸ್ಕ್ ಸೆಕ್ಷನ್ ಕಚೇರಿ ನಿರ್ಮಾಣಕ್ಕೆ ಭೂಮಿಪೂಜೆ ನೆರವೇರಿಸಿದ ಶಾಸಕ ಡಾ.ಮಂತರ್ ಗೌಡ
ಶಾಂತಳ್ಳಿ,:ಶಾಂತಳ್ಳಿ ಗ್ರಾಮದಲ್ಲಿ ₹80 ಲಕ್ಷ ವೆಚ್ಚದಲ್ಲಿ ನಿರ್ಮಾಣವಾಗಲಿರುವ ಸೆಸ್ಕ್ ಸೆಕ್ಷನ್ ಕಚೇರಿಗೆ ಗ್ರಾಮಸ್ಥರ ಸಮ್ಮುಖದಲ್ಲಿ ಭೂಮಿಪೂಜೆ ನೆರವೇರಿಸಲಾಯಿತು.

ಈ ಕಚೇರಿಯ ನಿರ್ಮಾಣವು ಗ್ರಾಮೀಣ ಭಾಗದ ಜನರ ಬಹುದಿನಗಳ ಬೇಡಿಕೆಯಾಗಿತ್ತು. ಜನರ ಆಶಯಕ್ಕೆ ಸ್ಪಂದಿಸಿ ಈ ಕಾಮಗಾರಿಗೆ ಚಾಲನೆ ನೀಡಲಾಗಿದೆ ಎಂದು ಮಡಿಕೇರಿ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ ತಿಳಿಸಿದರು.

ಗ್ರಾಮೀಣ ಪ್ರದೇಶದ ಜನರಿಗೆ ಅಗತ್ಯವಾದ ಮೂಲಭೂತ ಸೌಕರ್ಯಗಳನ್ನು ಒದಗಿಸುವುದು ನನ್ನ ಪ್ರಥಮ ಆದ್ಯತೆಯಾಗಿದೆ ಎಂದ ಅವರು, ಕೊಡಗು ಜಿಲ್ಲೆಯ ಎರಡು ತಾಲೂಕುಗಳಲ್ಲಿ ವಿದ್ಯುತ್ ಮಾರ್ಗಗಳನ್ನು ವೈಜ್ಞಾನಿಕವಾಗಿ ಉನ್ನತೀಕರಿಸುವ ಕಾರ್ಯ ಕೈಗೊಳ್ಳಲಾಗಿದೆ. ಮಡಿಕೇರಿ ನಗರದಲ್ಲಿ ₹90 ಕೋಟಿ ವೆಚ್ಚದಲ್ಲಿ ಭೂಗತ ವಿದ್ಯುತ್ ಕೇಬಲ್ ಅಳವಡಿಸುವ ಯೋಜನೆ ರೂಪಿಸಲಾಗಿದೆ. ಗ್ರಾಮೀಣ ಭಾಗಗಳಲ್ಲಿ ಎದುರಾಗುತ್ತಿರುವ ವಿದ್ಯುತ್ ಸಮಸ್ಯೆಗಳನ್ನು ಹಂತ ಹಂತವಾಗಿ ಬಗೆಹರಿಸಿ, ಜನರಿಗೆ ಗುಣಮಟ್ಟದ ಹಾಗೂ ನಿರಂತರ ವಿದ್ಯುತ್ ಪೂರೈಕೆ ಕಲ್ಪಿಸಲು ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ಹೇಳಿದರು.