Kodagu

ಶನಿವಾರಸಂತೆ ಕಣಿವೆ ಬಸವನಹಳ್ಳಿಯಲ್ಲಿ ಶಾಸಕ ಡಾ.ಮಂತರ್ ಗೌಡರಿಂದ ಗೌರಿ-ಗಣೇಶ ಪೂಜೆ

admincoorgdaily

ಶನಿವಾರಸಂತೆ ಕಣಿವೆ ಬಸವನಹಳ್ಳಿಯಲ್ಲಿ ಶಾಸಕ ಡಾ.ಮಂತರ್ ಗೌಡರಿಂದ ಗೌರಿ-ಗಣೇಶ ಪೂಜೆ
ಶನಿವಾರಸಂತೆ, ಸೆ.15: ಕಣಿವೆ ಬಸವನಹಳ್ಳಿ ಗ್ರಾಮದಲ್ಲಿ ಗೌರಿ ಗಣೇಶ ಸೇವಾ ಸಮಿತಿ ಹಾಗೂ ಗ್ರಾಮಸ್ಥರು ಗ್ರಾಮದ ಸಮುದಾಯ ಭವನದಲ್ಲಿ ಪ್ರತಿಷ್ಠಾಪನೆ ಮಾಡಿರುವ ಗೌರಿ ಗಣೇಶ ಮೂರ್ತಿಗೆ ಮಡಿಕೇರಿ ಕ್ಷೇತ್ರದ ಶಾಸಕರಾದ ಡಾ.ಮಂತರ್ ಗೌಡ ರವರು ವಿಶೇಷ ಪೂಜೆ ಸಲ್ಲಿಸಿದರು.

ಈ ಸಂದರ್ಭದಲ್ಲಿ ಸೋಮವಾರಪೇಟೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬಿ.ಬಿ.ಸತೀಶ್, ಯೂತ್ ಕಾಂಗ್ರೆಸ್ ಅಧ್ಯಕ್ಷ ಕಿರಣ್, ಪ್ರಮುಖರಾದ ಚೇತನ್, ಜೀವನ್, ಕೋಮರಪ್ಪ, ವಲಯ ಕಾಂಗ್ರೆಸ್ ಅಧ್ಯಕ್ಷ ಅಶೋಕ್, ಗೌರಿ ಗಣೇಶ ಸೇವಾ ಸಮಿತಿ ಅಧ್ಯಕ್ಷ ಸೂರಜ್, ಕಾರ್ಯದರ್ಶಿ ಸೃಜನ್ ಹಾಗೂ ಸೇವಾ ಸಮಿತಿ ಪದಾಧಿಕಾರಿಗಳು, ಗ್ರಾಮಸ್ಥರು ಉಪಸ್ಥಿತರಿದ್ದರು.