Kodagu

ಗುಡ್ಡೆಹೊಸೂರಿನಲ್ಲಿ 75 ಲಕ್ಷ ರೂ. ರಸ್ತೆ ಕಾಮಗಾರಿಗೆ ಶಾಸಕ ಮಂತರ್ ಗೌಡರಿಂದ ಗುದ್ದಲಿಪೂಜೆ

admincoorgdaily

ಗುಡ್ಡೆಹೊಸೂರಿನಲ್ಲಿ 75 ಲಕ್ಷ ರೂ. ರಸ್ತೆ ಕಾಮಗಾರಿಗೆ ಶಾಸಕ ಮಂತರ್ ಗೌಡರಿಂದ ಗುದ್ದಲಿಪೂಜೆ
ಕುಶಾಲನಗರ: ಗುಡ್ಡೆಹೊಸೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ 75 ಲಕ್ಷ ರೂ. ವೆಚ್ಚದ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಶಾಸಕ ಡಾ. ಮಂತರ್ ಗೌಡ ಅವರು ಗುದ್ದಲಿಪೂಜೆ ನೆರವೇರಿಸಿದರು.

ಕರ್ನಾಟಕ ರಾಜ್ಯ ಸರ್ಕಾರದ ಎಸ್‌ಸಿಎಸ್‌ಪಿ ಅನುದಾನದಡಿ 75 ಲಕ್ಷ ರೂ.ಗಳ ಕಾಮಗಾರಿಗೆ ಶಾಸಕರು ಚಾಲನೆ ನೀಡಿದ್ದಾರೆ.

ಗುಡ್ಡೇಹೊಸೂರು ಗ್ರಾ.ಪಂ.ನ ಮಾದಾಪಟ್ಟಣದಲ್ಲಿ 25 ಲಕ್ಷ ರೂ., ಹೊಸಕಾಡು ಹಾಡಿಯ ಬಳಿ 25 ಲಕ್ಷ ರೂ. ಹಾಗೂ ಹೊಸಕಾಡು ಚೆಕ್ ಪೋಸ್ಟ್ ಬಳಿ 25 ಲಕ್ಷ ರೂ. ವೆಚ್ಚದ ಕಾಮಗಾರಿಗಳಿಗೆ ಗುದ್ದಲಿಪೂಜೆ ನೆರವೇರಿಸಲಾಯಿತು.

ಈ ಸಂದರ್ಭ ಮಾತನಾಡಿದ ಶಾಸಕ ಡಾ. ಮಂತರ್ ಗೌಡ ಅವರು, ಸರ್ಕಾರ ಜನರಿಗೆ ಗ್ಯಾರಂಟಿ ಯೋಜನೆಯೊಂದಿಗೆ ಅಭಿವೃದ್ಧಿಗೂ ಬಹಳಷ್ಟು ಅನುದಾನ ನೀಡುತ್ತಿದೆ. ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚಿನ ಅನುದಾನ ತಂದು ಕ್ಷೇತ್ರದ ಅಭಿವೃದ್ಧಿ ಮಾಡಲಾಗುವುದು ಎಂದರು.

ಈ ಸಂದರ್ಭ ತಾಲ್ಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ವಿ.ಪಿ. ಶಶಿಧರ್, ಕಾಂಗ್ರೆಸ್ ಮುಖಂಡರಾದ ಕೆ.ಪಿ. ಚಂದ್ರಕಲಾ, ಮಂಜುನಾಥ್ ಗುಂಡೂರಾವ್, ಪ್ರಮೋದ್ ಮುತ್ತಪ್ಪ, ಜೋಸೆಫ್ ವಿಕ್ಟರ್ ಸೋನ್ಸ್, ನಂಗಾರು ಜಗ, ರಂಜನ್, ರೋಷನ್, ಪಿಡಿಒ ಸುಮೇಶ್ ಹಾಗೂ ಸ್ಥಳೀಯ ಮುಖಂಡರು ಇದ್ದರು.