Kodagu

ಗುಡ್ಡೆಹೊಸೂರಿನಲ್ಲಿ 2.50 ಕೋಟಿ ರೂ ವೆಚ್ಚದ ರಸ್ತೆ ಕಾಮಗಾರಿಗೆ ಶಾಸಕ ಮಂತರ್ ಗೌಡ ಗುದ್ದಲಿಪೂಜೆ

admincoorgdaily

ಗುಡ್ಡೆಹೊಸೂರಿನಲ್ಲಿ 2.50 ಕೋಟಿ ರೂ ವೆಚ್ಚದ ರಸ್ತೆ ಕಾಮಗಾರಿಗೆ ಶಾಸಕ ಮಂತರ್ ಗೌಡ ಗುದ್ದಲಿಪೂಜೆ
ಕುಶಾಲನಗರ: ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕ ಡಾ. ಮಂತರ್ ಗೌಡ ಅವರು ಇಂದು ಮಧ್ಯಾಹ್ನ  ಗುಡ್ಡೆಹೊಸೂರು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಗುದ್ದಲಿಪೂಜೆ ನೆರವೇರಿಸಿದರು.

ನಂಗಾರು ಜಗ್ಗ ಅವರ ಮನೆ ಬಳಿ ನಡೆದ ಕಾರ್ಯಕ್ರಮದಲ್ಲಿ, ಬಾಳುಗೋಡುವಿನಿಂದ ರಂಗಸಮುದ್ರದ ಗಡಿವರೆಗೆ 2.50 ಕೋಟಿ ರೂ.ವೆಚ್ಚದ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಚಾಲನೆ ನೀಡಲಾಯಿತು.

ಈ ಸಂದರ್ಭದಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ವಿ.ಪಿ. ಶಶಿಧರ್, ಸ್ಥಳೀಯ ಮುಖಂಡರಾದ ಚಂದ್ರಶೇಖರ್, ಜಗ ನಂಗಾರು ಸೇರಿದಂತೆ ಸ್ಥಳೀಯ ಮುಖಂಡರು, ಮಾಜಿ ಗ್ರಾಮ ಪಂಚಾಯತಿ ಸದಸ್ಯರು, ಕಾರ್ಯಕರ್ತರು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.