Kodagu

ಹೆಬ್ಬಾಲೆ ಕಾಲೇಜು ವಿದ್ಯಾರ್ಥಿಗಳಿಗೆ ಶಾಸಕ ಮಂತರ್ ಗೌಡ ನೆರವು

admincoorgdaily

ಹೆಬ್ಬಾಲೆ ಕಾಲೇಜು ವಿದ್ಯಾರ್ಥಿಗಳಿಗೆ ಶಾಸಕ ಮಂತರ್ ಗೌಡ ನೆರವು
ಹೆಬ್ಬಾಲೆ:ಹೆಬ್ಬಾಲೆ ಸಂಯುಕ್ತ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ರಾಜ್ಯಮಟ್ಟದ ವಾಲಿಬಾಲ್ ಪಂದ್ಯಾವಳಿಯಲ್ಲಿ ಭಾಗವಹಿಸಲು ಬೆಂಗಳೂರಿಗೆ ತೆರಳಲು ಶಾಸಕ ಡಾ. ಮಂತರ್ ಗೌಡ ಅವರು ಸೂಕ್ತ ವಾಹನದ ವ್ಯವಸ್ಥೆ ಮಾಡಿಕೊಟ್ಟಿದ್ದಾರೆ.

ತಾಲೂಕು ಹಾಗೂ ಜಿಲ್ಲಾ ಮಟ್ಟದಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದ ವಿದ್ಯಾರ್ಥಿಗಳಿಗೆ ಬೆಂಗಳೂರಿಗೆ ತೆರಳಲು ವಾಹನದ ಸಮಸ್ಯೆಯಾಗಿತ್ತು. ಈ ವಿಚಾರ ಶಾಸಕರ ಗಮನಕ್ಕೆ ಬರುತ್ತಿದ್ದಂತೆ ಕೂಡಲೇ ಸ್ಪಂದಿಸಿದ ಶಾಸಕರು ವಿದ್ಯಾರ್ಥಿಗಳ ಪ್ರಯಾಣಕ್ಕೆ ವಾಹನದ ವ್ಯವಸ್ಥೆ ಮಾಡಿಕೊಟ್ಟು, ಅವರಿಗೆ ಬೇಕಾದ ಎಲ್ಲಾ ಸೌಲಭ್ಯಗಳನ್ನು ಕಲ್ಪಿಸಿದ್ದಾರೆ.

ಈ ಸಂದರ್ಭದಲ್ಲಿ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದ ಶಾಸಕರು, ಗ್ರಾಮೀಣ ಭಾಗದ ವಿದ್ಯಾರ್ಥಿಗಳು ಕ್ರೀಡೆಯಲ್ಲಿ ಇನ್ನಷ್ಟು ಸಾಧನೆ ಮಾಡಬೇಕು. ನಿಮ್ಮ ಸಾಧನೆಯೇ ನಮ್ಮ ಕ್ಷೇತ್ರಕ್ಕೆ ಹೆಮ್ಮೆ. ಯಾವುದೇ ತೊಂದರೆ ಇಲ್ಲದಂತೆ ಆಟದತ್ತ ಗಮನಹರಿಸಿ, ಉತ್ತಮ ಪ್ರದರ್ಶನ ನೀಡಿ ಬನ್ನಿ ಎಂದು ಹುರಿದುಂಬಿಸಿದರು.

ಶಾಸಕರ ಈ ಸಹಾಯಕ್ಕೆ ಕಾಲೇಜಿನ ಪ್ರಾಂಶುಪಾಲರು, ದೈಹಿಕ ಶಿಕ್ಷಣ ಶಿಕ್ಷಕರು, ವಿದ್ಯಾರ್ಥಿಗಳು ಹಾಗೂ ಪೋಷಕರು ಕೃತಜ್ಞತೆ ಸಲ್ಲಿಸಿದ್ದಾರೆ.