Kodagu

ದೇವಸ್ಥಾನಗಳ ಅಭಿವೃದ್ಧಿಗೆ 50 ಲಕ್ಷ ಅನುದಾನಕ್ಕೆ ಶಾಸಕ ಮಂತರ್ ಗೌಡ ಮನವಿ

admincoorgdaily

ದೇವಸ್ಥಾನಗಳ ಅಭಿವೃದ್ಧಿಗೆ 50 ಲಕ್ಷ ಅನುದಾನಕ್ಕೆ ಶಾಸಕ ಮಂತರ್ ಗೌಡ ಮನವಿ
ಮಡಿಕೇರಿ, ಸೆ.09: ಸೋಮವಾರಪೇಟೆ ತಾಲ್ಲೂಕಿನ ಶ್ರೀ ವೀರಭದ್ರೇಶ್ವರ ಸ್ವಾಮಿ, ಕನ್ನಂಬಾಡಿ ಅಮ್ಮ ಮತ್ತು ಮಳೆ ಮಲ್ಲೇಶ್ವರ ಸ್ವಾಮಿ ದೇವಸ್ಥಾನಗಳ ಅಭಿವೃದ್ಧಿಗೆ 50 ಲಕ್ಷ ರೂ. ಅನುದಾನ ನೀಡುವಂತೆ ಮಡಿಕೇರಿ ಶಾಸಕ ಡಾ.ಮಂತರ್ ಗೌಡ ಅವರು ಸರ್ಕಾರಕ್ಕೆ ಮನವಿ ಸಲ್ಲಿಸಿದ್ದಾರೆ.

ಕೊಡಗಿನ ಧಾರ್ಮಿಕ ಮತ್ತು ಸಾಂಸ್ಕೃತಿಕ ಪರಂಪರೆಯ ಪ್ರತೀಕವಾಗಿರುವ ಈ ದೇವಸ್ಥಾನಗಳ ಜೀರ್ಣೋದ್ಧಾರ ಮತ್ತು ಮೂಲಸೌಕರ್ಯ ಅಭಿವೃದ್ಧಿಗೆ ಕಾಳಜಿ ವಹಿಸಿರುವ ಶಾಸಕರು, ಮುಜರಾಯಿ ಇಲಾಖೆ ಸಚಿವ ಕೆ.ಎಸ್. ಬಸವಂತಪ್ಪ ಅವರನ್ನು ಭೇಟಿ ಮಾಡಿ ಪತ್ರದ ಮೂಲಕ ಮನವಿ ಸಲ್ಲಿಸಿದರು.

ದೇವಸ್ಥಾನಗಳ ಜೀರ್ಣೋದ್ಧಾರ ಹಾಗೂ ಭಕ್ತರಿಗೆ ಅಗತ್ಯ ಸೌಲಭ್ಯ ಕಲ್ಪಿಸುವ ನಿಟ್ಟಿನಲ್ಲಿ ಈ ಅನುದಾನ ಅಗತ್ಯವಿದೆ ಎಂದು ಅವರು ಮನವಿಯಲ್ಲಿ ತಿಳಿಸಿದ್ದಾರೆ.

ಈ ಸಂದರ್ಭದಲ್ಲಿ ಅಬ್ಬೂರುಕಟ್ಟೆ ವಲಯ ಕಾಂಗ್ರೆಸ್ ಅಧ್ಯಕ್ಷ ಲೋಕೇಶ್ ಹೊಸಳ್ಳಿ, ಮುಖಂಡರಾದ ಅರುಣ್ ಕೊತ್ನಳ್ಳಿ, ನೇಗಳ್ಳೆ-ಕರ್ಕಳ್ಳಿ ಬೂತ್ ಅಧ್ಯಕ್ಷರಾದ ಮೇಘ, ಪರಮೇಶ್ ಉಪಸ್ಥಿತರಿದ್ದರು.