Kodagu

ಅಲ್ಪಸಂಖ್ಯಾತರಿಗೆ ರಾಜಕೀಯ ಪ್ರಾತಿನಿಧ್ಯ ಕಲ್ಪಿಸುವಲ್ಲಿ ಶಾಸಕ ಮಂತರ್ ಗೌಡ ಪ್ರಯತ್ನಕ್ಕೆ ಫಲ; ಮಂಜುನಾಥ್ ಗುಂಡೂರಾವ್ ಅವರ ಒತ್ತಾಯಕ್ಕೆ ಮನ್ನಣೆ

admincoorgdaily

ಅಲ್ಪಸಂಖ್ಯಾತರಿಗೆ ರಾಜಕೀಯ ಪ್ರಾತಿನಿಧ್ಯ ಕಲ್ಪಿಸುವಲ್ಲಿ ಶಾಸಕ ಮಂತರ್ ಗೌಡ ಪ್ರಯತ್ನಕ್ಕೆ ಫಲ; ಮಂಜುನಾಥ್ ಗುಂಡೂರಾವ್ ಅವರ ಒತ್ತಾಯಕ್ಕೆ ಮನ್ನಣೆ
ಕುಶಾಲನಗರ: ವಾಲ್ನೂರು–ತ್ಯಾಗತ್ತೂರು ಜಿಲ್ಲಾ ಪಂಚಾಯಿತಿ ಕ್ಷೇತ್ರವನ್ನು ಬಿ.ಸಿ.ಎಂ. (ಎ) ಸಾಮಾನ್ಯ ಮೀಸಲಾತಿ ಕ್ಷೇತ್ರವನ್ನಾಗಿ ಬದಲಾವಣೆ ಮಾಡುವಲ್ಲಿ ಶಾಸಕ ಡಾ. ಮಂತರ್ ಗೌಡ ಅವರು ನಡೆಸಿದ ಪ್ರಯತ್ನ ಫಲ ನೀಡಿದ್ದು, ಸ್ಥಳೀಯ ಅಲ್ಪಸಂಖ್ಯಾತ ಸಮುದಾಯದ ಬಹುದಿನಗಳ ಬೇಡಿಕೆಗೆ ಸ್ಪಂದಿಸಿದಂತಾಗಿದೆ.

ಜಿಲ್ಲಾ ಪಂಚಾಯಿತಿ ಚುನಾವಣೆಯಲ್ಲಿ ಅಲ್ಪಸಂಖ್ಯಾತ ಸಮುದಾಯದ ಅಭ್ಯರ್ಥಿಗಳಿಗೆ ಸ್ಪರ್ಧಿಸಲು ಅವಕಾಶ ಕಲ್ಪಿಸುವುದರ ಜೊತೆಗೆ ಕಾಂಗ್ರೆಸ್ ಪಕ್ಷದಿಂದ ಸೂಕ್ತ ಪ್ರಾತಿನಿಧ್ಯ ಹಾಗೂ ಟಿಕೆಟ್ ನೀಡಬೇಕೆಂಬ ಬೇಡಿಕೆಯನ್ನು ಕೆಪಿಸಿಸಿ ಸದಸ್ಯ ಮಂಜುನಾಥ್ ಗುಂಡೂರಾವ್ ಅವರು ಬಲವಾಗಿ ಪ್ರತಿಪಾದಿಸಿದ್ದರು. ಅಲ್ಪಸಂಖ್ಯಾತ ಸಮುದಾಯಕ್ಕೂ ರಾಜಕೀಯ ಅವಕಾಶ ದೊರೆಯಬೇಕು ಎಂಬ ಉದ್ದೇಶದಿಂದ ಅವರು ಬಹಿರಂಗವಾಗಿಯೇ ಧ್ವನಿ ಎತ್ತಿ, ಪಕ್ಷದ ಮುಖಂಡರು ಹಾಗೂ ಸಂಬಂಧಪಟ್ಟವರ ಗಮನ ಸೆಳೆದಿದ್ದರು.
ಕುಶಾಲನಗರ ತಾಲೂಕಿನಲ್ಲಿ ತಾಲೂಕು ಹೋರಾಟಗಾರ ವಿ.ಪಿ. ಶಶಿಧರ ಮತ್ತು ಅಲ್ಪಸಂಖ್ಯಾತರಿಗೆ ಒಂದು ಅವಕಾಶ ಕೊಡಬೇಕು ಎಂದು ಒತ್ತಾಯಿಸಿದ್ದರು.

ಈ ಬೇಡಿಕೆಗೆ ಸ್ಪಂದಿಸಿದ ಶಾಸಕ ಡಾ. ಮಂತರ್ ಗೌಡ ಅವರು ಸರ್ಕಾರದ ಮಟ್ಟದಲ್ಲಿ ಪ್ರಯತ್ನ ನಡೆಸಿ, ವಾಲ್ನೂರು–ತ್ಯಾಗತ್ತೂರು ಜಿಲ್ಲಾ ಪಂಚಾಯಿತಿ ಕ್ಷೇತ್ರವನ್ನು ಬಿ.ಸಿ.ಎಂ. (ಎ) ಮೀಸಲಾತಿಗೆ ಒಳಪಡಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ.

ಅಲ್ಪಸಂಖ್ಯಾತರಿಗೆ ರಾಜಕೀಯ ಪ್ರಾತಿನಿಧ್ಯ ದೊರೆಯಬೇಕು ಮತ್ತು ಅವರಿಗೆ ಚುನಾವಣೆಯಲ್ಲಿ ಸ್ಪರ್ಧಿಸಲು ಅವಕಾಶ ಕಲ್ಪಿಸಬೇಕು ಎಂದು ಮಂಜುನಾಥ್ ಗುಂಡೂರಾವ್ ಅವರು ನಿರಂತರವಾಗಿ ವ್ಯಕ್ತಪಡಿಸಿದ್ದ ಒತ್ತಾಯಕ್ಕೆ ಇದೀಗ ಮಹತ್ವ ದೊರೆತಂತಾಗಿದೆ. ಶಾಸಕರ ಪ್ರಯತ್ನ ಹಾಗೂ ಸ್ಥಳೀಯ ಮುಖಂಡರ ಬೇಡಿಕೆಗೆ ಸ್ಪಂದಿಸಿರುವುದರಿಂದ ಅಲ್ಪಸಂಖ್ಯಾತ ಸಮುದಾಯದ ಮುಖಂಡರಲ್ಲಿ ಸಂತಸ ವ್ಯಕ್ತವಾಗಿದೆ.