ಶಾಸಕ ಮಂತರ್ ಗೌಡ ಅವರ ಫ್ಲೆಕ್ಸ್ ಹರಿದಿದ್ದು ಬಿಜೆಪಿಯ ಕೀಳುಮಟ್ಟದ ರಾಜಕೀಯ ;ಎಚ್ಎ ಹಂಸ ಆಕ್ರೋಶ, ಉಗ್ರ ಹೋರಾಟದ ಎಚ್ಚರಿಕೆ
admincoorgdaily

ಮಡಿಕೇರಿ: ಮಡಿಕೇರಿ ನಗರದಲ್ಲಿ ಕೊಡಗು ಜಿಲ್ಲಾ ಬಿಜೆಪಿ ಪ್ರತಿಭಟನೆ ಸಂದರ್ಭದಲ್ಲಿ ನಾಡಹಬ್ಬ ದಸರಾಗೆ ಶುಭಕೋರಲು ಹಾಕಿದ್ದ ಶಾಸಕ ಡಾ.ಮಂತರ್ ಗೌಡ ಅವರ ಫ್ಲೆಕ್ಸ್ ಹರಿದಿರುವುದು ತೀವ್ರ ಖಂಡನೀಯವಾಗಿದೆ ಎಂದು ಮಡಿಕೇರಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಹಂಸ ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಎಲ್ಲರಿಗೂ ಪ್ರತಿಭಟನೆ ಮಾಡಲು ಪೂರ್ಣ ಸ್ವಾತಂತ್ರ್ಯ ಇದೆ. ಆದರೆ ಇಂದು ಮಡಿಕೇರಿ ನಗರದಲ್ಲಿ ಬಿಜೆಪಿಯವರು ಶಾಸಕ ಡಾ.ಮಂತರ್ ಗೌಡ ಅವರ ಫ್ಲೆಕ್ಸ್ ಹರಿದು ಹಾಕಿರುವುದು ಕೀಳುಮಟ್ಟದ ರಾಜಕೀಯವಾಗಿದೆ ಎಂದು ಟೀಕಿಸಿದ್ದಾರೆ.
ಕ್ಷೇತ್ರದಲ್ಲಿ ಶಾಸಕ ಡಾ.ಮಂತರ್ ಗೌಡ ಅವರ ಅಭಿವೃದ್ಧಿ ಕೆಲಸಗಳಿಂದ ಬಿಜೆಪಿ ಹತಾಶೆಗೊಂಡಿದೆ. 24 ಗಂಟೆಗಳೊಳಗೆ ಫ್ಲೆಕ್ಸ್ ಹರಿದು ಹಾಕಿರುವ ಬಿಜೆಪಿ ಕಾರ್ಯಕರ್ತನನ್ನು ಬಂಧಿಸದಿದ್ದರೆ ಮಡಿಕೇರಿ ಬ್ಲಾಕ್ ಕಾಂಗ್ರೆಸ್ ವತಿಯಿಂದ ಮಡಿಕೇರಿಯಲ್ಲಿ ಉಗ್ರ ಹೋರಾಟ ಮಾಡಲಾಗುವುದು ಎಂದು ಹಂಸ ಅವರು ಎಚ್ಚರಿಕೆ ನೀಡಿದ್ದಾರೆ.