Kodagu

ವಿರಾಜಪೇಟೆಯಲ್ಲಿ ಒಳಚರಂಡಿ ಹಾಗೂ ಬೀದಿದೀಪ ಉದ್ಘಾಟಿಸಿದ ಶಾಸಕ ಪೊನ್ನಣ್ಣ

admincoorgdaily

ವಿರಾಜಪೇಟೆಯಲ್ಲಿ ಒಳಚರಂಡಿ ಹಾಗೂ ಬೀದಿದೀಪ ಉದ್ಘಾಟಿಸಿದ ಶಾಸಕ ಪೊನ್ನಣ್ಣ
ವಿರಾಜಪೇಟೆ; ಪುರಸಭೆ ವ್ಯಾಪ್ತಿಯ ಕಾವೇರಿ ಬಡಾವಣೆಯಲ್ಲಿ ಶಾಸಕರು ಹಾಗೂ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿಗಳಾದ  ಅಜ್ಜಿಕುಟ್ಟಿರ ಎಸ್. ಪೊನ್ನಣ್ಣ ಅವರ ₹10 ಲಕ್ಷ ಅನುದಾನದಲ್ಲಿ ಕೈಗೆತ್ತಿಕೊಳ್ಳಲಾದ ಒಳಚರಂಡಿ ಕಾಮಗಾರಿ ಹಾಗೂ ನೂತನ ಬೀದಿದೀಪಗಳ ವ್ಯವಸ್ಥೆಯನ್ನು ಉದ್ಘಾಟಿಸಿ ಸಾರ್ವಜನಿಕರ ಬಳಕೆಗೆ ಸಮರ್ಪಿಸಲಾಯಿತು.

ಸ್ಥಳೀಯ ನಿವಾಸಿಗಳ ಬಹುದಿನಗಳ ಬೇಡಿಕೆಗೆ ಸ್ಪಂದಿಸಿ ಮೂಲಭೂತ ಸೌಕರ್ಯಗಳನ್ನು ಕಲ್ಪಿಸುವ ನಿಟ್ಟಿನಲ್ಲಿ ಈ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳಲಾಗಿದೆ. ಸಾರ್ವಜನಿಕರಿಗೆ ಉತ್ತಮ ಪರಿಸರ ಹಾಗೂ ಸುಗಮ ಜೀವನಕ್ಕೆ ಅಗತ್ಯವಾದ ಸೌಲಭ್ಯಗಳನ್ನು ಒದಗಿಸುವುದು ನಮ್ಮ ಆದ್ಯತೆಯಾಗಿದೆ.

ಈ ಸಂದರ್ಭದಲ್ಲಿ ಬ್ಲಾಕ್ ಅಧ್ಯಕ್ಷರಾದ ಪಟ್ಟಡ ರಂಜಿ ಪೂಣಚ್ಚ, ತಾಲೂಕು ಬಗರ್ ಹುಕುಂ ಸಮಿತಿಯ ಅಧ್ಯಕ್ಷರಾದ ಆರ್ ಕೆ ಸಲಾಂ, ನಗರ ಕಾಂಗ್ರೆಸ್ ಅಧ್ಯಕ್ಷರಾದ ಮಾಳೆಟೀರ ಬೋಪಣ್ಣ, ವಿರಾಜಪೇಟೆ ಬ್ಲಾಕ್ ಪ್ರಧಾನ ಕಾರ್ಯದರ್ಶಿ ಮಂಜುನಾಥ್, ಪುರಸಭೆ ಮಾಜಿ ಸದಸ್ಯರು ಅತಿಫ್ ಮನ್ನ, ಪಕ್ಷದ ಮುಖಂಡರಾದ ಬೊಳ್ಳಚಂಡ ಸೋಮಣ್ಣ, ಕುಂಡಚ್ಚಿರ ಮಂಜು ದೇವಯ್ಯ, ಮಹಾದೇವ, ಮೆಲ್ ರೋಯ್ ಲೋಬೊ, ಸ್ಥಳೀಯ ಪ್ರಮುಖರಾದ ರಘು ಮಣಿ, ಸುಬ್ಬಯ್ಯ, ಅಪ್ಪಣ್ಣ,ಲಾಲಾ, ಬೊಳ್ಳಿಕಟ್ಟಿ ಹಾಗೂ ಪ್ರಮುಖರು ಉಪಸ್ಥಿತರಿದ್ದರು.