ನಾಪೋಕ್ಲುವಿನ ನಾಲ್ನಾಡ್ ರಿಕ್ರಿಯೇಶನ್ ಕ್ಲಬ್ ನ ನೂತನ ಅತಿಥಿ ಕೊಠಡಿ ಉದ್ಘಾಟಿಸಿದ ಶಾಸಕ ಪೊನ್ನಣ್ಣ
admincoorgdaily

ನಾಪೋಕ್ಲು :ನಾಪೋಕ್ಲುವಿನ ನಾಲ್ನಾಡ್ ಪ್ಲಾಂಟರ್ಸ್ ರಿಕ್ರಿಯೇಷನ್ ಕ್ಲಬ್‌ನ ನೂತನ ಅತಿಥಿ ಕೊಠಡಿಯನ್ನು ಹಾಗೂ ಶಾಸಕರ ನಿಧಿಯಿಂದ 5 ಲಕ್ಷ ರೂ ವೆಚ್ಚದಲ್ಲಿ ಕ್ಲಬ್ ನ ಆವರಣದಲ್ಲಿ ನಿರ್ಮಿಸಲಾದ ಕಾಂಕ್ರೀಟ್ ಕಾಮಗಾರಿಯನ್ನು ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕರು ಹಾಗೂ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿಗಳಾದ ಅಜ್ಜಿಕುಟ್ಟಿರ ಎಸ್. ಪೊನ್ನಣ್ಣ ಅವರು ಉದ್ಘಾಟಿಸಿದರು.
ಕಾರ್ಯಕ್ರಮದಲ್ಲಿ ನಾಲ್ನಾಡ್ ಪ್ಲಾಂಟರ್ಸ್ ರಿಕ್ರಿಯೇಷನ್ ಕ್ಲಬ್‌ನ ವತಿಯಿಂದ ಶಾಸಕ ಪೊನ್ನಣ್ಣ ಅವರನ್ನು ಗೌರವ ಪೂರ್ವಕವಾಗಿ ಸನ್ಮಾನಿಸಲಾಯಿತು.
ಈ ಸಂದರ್ಭ ನಾಲ್ನಾಡ್ ಪ್ಲಾಂಟರ್ಸ್ ರಿಕ್ರಿಯೇಷನ್ ಕ್ಲಬ್‌ನ ಅಧ್ಯಕ್ಷರಾದ ಬಾಚಮಾಂಡ ಲವ ಚಿಣ್ಣಪ್ಪ, ಉಪಾಧ್ಯಕ್ಷ ಹರೆಯಡ ರತ್ನ ಪೆಮ್ಮಯ್ಯ, ಕಾರ್ಯದರ್ಶಿ ಚಿಯಕಪೂವಂಡ ಅಪ್ಪಚ್ಚು, ಜಂಟಿ ಕಾರ್ಯದರ್ಶಿ ಹರೀಶ್ ಪೂವಯ್ಯ, ನಿರ್ದೇಶಕರಾದ ಬೊಳ್ಳಚೆಟ್ಟಿರ ಸುರೇಶ್ ಸೇರಿದಂತೆ ಕ್ಲಬ್ ನ ಸರ್ವ ಸದಸ್ಯರು ಹಾಗೂ ಮತ್ತಿತರ ಪ್ರಮುಖರು ಉಪಸ್ಥಿತರಿದ್ದರು.