ಬಾಳುಗೋಡು ಹಾಕಿ ಕ್ರೀಡಾಂಗಣದ ಗ್ಯಾಲರಿ ಕಾಮಗಾರಿ ಶೀಘ್ರ ಪೂರ್ಣಗೊಳಿಸಲು ಶಾಸಕ ಪೊನ್ನಣ್ಣ ಸೂಚನೆ
admincoorgdaily

ಬಾಳುಗೋಡು: ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿಗಳು ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕರಾದ ಅಜ್ಜಿಕುಟ್ಟಿರ ಎಸ್. ಪೊನ್ನಣ್ಣ ಅವರು ಬಾಳುಗೋಡುವಿನ ಹಾಕಿ ಕ್ರೀಡಾಂಗಣದ ಪ್ರೇಕ್ಷಕರ ಗ್ಯಾಲರಿ ನಿರ್ಮಾಣ ಕಾರ್ಯವನ್ನು ಶೀಘ್ರವಾಗಿ ಪೂರ್ಣಗೊಳಿಸಲು ಸಂಬಂಧಪಟ್ಟ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.
ಖಾಸಗಿ ಕಾರ್ಯಕ್ರಮವೊಂದರ ನಿಮಿತ್ತ ಬಾಳುಗೋಡುವಿಗೆ ಭೇಟಿ ನೀಡಿದ್ದ ಸಂದರ್ಭದಲ್ಲಿ ಅವರು ಕ್ರೀಡಾಂಗಣಕ್ಕೆ ತೆರಳಿ ಗ್ಯಾಲರಿ ಕಾಮಗಾರಿಯನ್ನು ಪರಿಶೀಲನೆ ನಡೆಸಿದರು.
ಈ ಸಂದರ್ಭದಲ್ಲಿ ಬಾಳುಗೋಡು ಕೊಡವ ಸಮಾಜದ ಅಧ್ಯಕ್ಷರಾದ ವಿಷ್ಣು ಕಾರ್ಯಪ್ಪ, ಪೊನ್ನಂಪೇಟೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಮಿದೇರಿರ ನವೀನ್, ಕೊಡವ ಸಮಾಜದ ಪ್ರಮುಖರು, ಪಕ್ಷದ ಪ್ರಮುಖರಾದ ಮಂಜು ದೇವಯ್ಯ,ಭವಿನ್ ಕುಶಾಲಪ್ಪ, ರಚನ್ ಉತ್ತಪ್ಪ ಹಾಗೂ ಪ್ರಮುಖರು ಉಪಸ್ಥಿತರಿದ್ದರು.