ಎಮ್ಮೆಮಾಡು ಗ್ರಾಮದಲ್ಲಿ ₹25 ಲಕ್ಷ ವೆಚ್ಚದ ಕಿರು ಸೇತುವೆ ಕಾಮಗಾರಿಗೆ ಶಾಸಕ ಪೊನ್ನಣ್ಣ ಭೂಮಿಪೂಜೆ
admincoorgdaily

ಮಡಿಕೇರಿ:* ತಾಲೂಕಿನ ಎಮ್ಮೆಮಾಡು ಗ್ರಾಮಕ್ಕೆ ವಿರಾಜಪೇಟೆ ಶಾಸಕರು ಹಾಗೂ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಅಜ್ಜಿಕುಟ್ಟಿರ ಎಸ್. ಪೊನ್ನಣ್ಣ ಭೇಟಿ ನೀಡಿದರು.
ಈ ಸಂದರ್ಭದಲ್ಲಿ ಸಣ್ಣ ನೀರಾವರಿ ಇಲಾಖೆ ವತಿಯಿಂದ ₹25 ಲಕ್ಷ ವೆಚ್ಚದಲ್ಲಿ ನಿರ್ಮಾಣವಾಗಲಿರುವ ಕಿರು ಸೇತುವೆ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿದರು.
ಇದೇ ಭಾಗದಲ್ಲಿ ಸುಮಾರು 60 ಸಾವಿರ ಲೀಟರ್ ಸಾಮರ್ಥ್ಯದ ನೀರು ಶೇಖರಣಾ ಟ್ಯಾಂಕ್ ಸಹ ನಿರ್ಮಾಣವಾಗಲಿದೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ನಾಪೋಕ್ಲು ಬ್ಲಾಕ್ ಅಧ್ಯಕ್ಷ ಸೌಕತ್ ಆಲಿ, ಡಿಸಿಸಿ ಉಪಾಧ್ಯಕ್ಷ ಹಾಗೂ ಕೆಡಿಪಿ ಸದಸ್ಯ ಅಬ್ದುಲ್ ರೆಹಮಾನ್, ಜಿಲ್ಲಾ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಹನೀಫ್ ಸಾದಲಿ, ವಲಯ ಅಧ್ಯಕ್ಷ ಮೂಸಾ, ಮಾಜಿ ಬ್ಲಾಕ್ ಅಧ್ಯಕ್ಷ ಇಸ್ಮಾಯಿಲ್, ಗ್ಯಾರಂಟಿ ಅನುಷ್ಠಾನ ಸಮಿತಿ ಸದಸ್ಯರಾದ ಸಿರಾಜ್ ಪರವಂಡ, ಉಮರ್, ಅಬುಬುಕರ್, ಸಖಾಫಿ, ಅಶ್ರಫ್, ಝುಬೈರ್, ಸ್ಥಳೀಯ ಪ್ರಮುಖರು, ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.