ತಿತಿಮತಿಯ ವಿನಾಯಕ ನಗರದ ಗಣೇಶೋತ್ಸವದಲ್ಲಿ ಶಾಸಕ ಪೊನ್ನಣ್ಣ ಭಾಗಿ
admincoorgdaily

ವಿರಾಜಪೇಟೆ: ಪೊನ್ನಂಪೇಟೆ ತಾಲೂಕಿನ ತಿತಿಮತಿಯ ವಿನಾಯಕ ನಗರದಲ್ಲಿ ಆಯೋಜಿಸಿರುವ ಶ್ರೀ ಗಣೇಶೋತ್ಸವ ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ವಿರಾಜಪೇಟೆ ಶಾಸಕರು ಹಾಗೂ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಎ.ಎಸ್.ಪೊನ್ನಣ್ಣ ಭಾಗವಹಿಸಿ, ದೇವರಿಗೆ ವಿಶೇಷ ಪೂಜೆ ಸಲ್ಲಿಸಿದರು.
ದಶಕಗಳಿಂದ ಈ ಭಾಗದಲ್ಲಿ ಅತ್ಯಂತ ಅದ್ದೂರಿಯಾಗಿ ನಡೆಯುತ್ತಿರುವ ಗಣೇಶೋತ್ಸವವು ಸ್ಥಳೀಯ ಭಕ್ತಾದಿಗಳಿಗೆ ಪೂಜೆ ಸಲ್ಲಿಸುವ ಅವಕಾಶದೊಂದಿಗೆ ಸಾರ್ವಜನಿಕ ಮನರಂಜನಾ ಕಾರ್ಯಕ್ರಮಗಳಿಗೆ ವೇದಿಕೆಯಾಗಿದೆ. ಹಲವು ದಿನಗಳ ಕಾಲ ಸಕಲ ಪೂಜಾ ವಿಧಿ-ವಿಧಾನಗಳೊಂದಿಗೆ ನಡೆಯುವ ಗಣೇಶೋತ್ಸವವು ನಾಡಿಗೆ ಒಳಿತನ್ನು ಮಾಡಲಿ ಎಂದು ಶಾಸಕರು ಪ್ರಾರ್ಥಿಸಿ, ಎಲ್ಲರಿಗೂ ಶುಭ ಕೋರಿದರು.
ಈ ಸಂದರ್ಭದಲ್ಲಿ ರಾಜ್ಯ ಕ್ರೀಡಾ ಪ್ರಾಧಿಕಾರದ ಉಪಾಧ್ಯಕ್ಷ ಚೆಪ್ಪುಡೀರ ಅರುಣ್ ಮಾಚಯ್ಯ, ಬ್ಲಾಕ್ ಅಧ್ಯಕ್ಷ ಮಿದೇರಿರ ನವೀನ್, ವಲಯ ಅಧ್ಯಕ್ಷ ನವೀನ್, ವಿಶಾಲ್ ಅಯ್ಯಣ್ಣ, ವಿನಾಯಕ ಸೇವಾ ಸಮಿತಿ ಅಧ್ಯಕ್ಷ ಸಂತೋಷ್, ಮಾಜಿ ಜಿಲ್ಲಾ ಪಂಚಾಯಿತಿ ಸದಸ್ಯ ಪಂಕಜ, ಲ್ಯಾಂಪ್ ಸೊಸೈಟಿ ಅಧ್ಯಕ್ಷ ಮಣಿ, ಕಾಫಿ ಬೆಳೆಗಾರ ಚೆಪ್ಪುಡೀರ ಕಾರ್ಯಪ್ಪ, ಮಾಜಿ ಗ್ರಾಮ ಪಂಚಾಯಿತಿ ಸದಸ್ಯ ಅಫ್ರೋಜ್, ವಿನಾಯಕ ಸೇವಾ ಸಮಿತಿಯ ಸದಸ್ಯರು, ಪದಾಧಿಕಾರಿಗಳು ಹಾಗೂ ಪ್ರಮುಖರು ಉಪಸ್ಥಿತರಿದ್ದರು.