Kodagu

ಬಾಳುಗೋಡು ಪರಂಬು ಜನರ ಬೇಡಿಕೆಗೆ ಸ್ಪಂದಿಸಿದ ಶಾಸಕ ಪೊನ್ನಣ್ಣ - ನೀರು, ಹಕ್ಕುಪತ್ರ ಸಮಸ್ಯೆ ಪರಿಹಾರಕ್ಕೆ ಭರವಸೆ

admincoorgdaily

ಬಾಳುಗೋಡು ಪರಂಬು ಜನರ ಬೇಡಿಕೆಗೆ ಸ್ಪಂದಿಸಿದ ಶಾಸಕ ಪೊನ್ನಣ್ಣ - ನೀರು, ಹಕ್ಕುಪತ್ರ ಸಮಸ್ಯೆ ಪರಿಹಾರಕ್ಕೆ ಭರವಸೆ
ವಿರಾಜಪೇಟೆ; ವಿರಾಜಪೇಟೆ ತಾಲ್ಲೂಕು ಬಾಳುಗೋಡುವಿನ ಪರಂಬು ಭಾಗದ ಪರಿಶಿಷ್ಟ ಪಂಗಡದ ಸಮುದಾಯದ ಜನರು ಇಂದು ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕರು ಹಾಗೂ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿಗಳಾದ ಅಜ್ಜಿಕುಟ್ಟಿರ ಎಸ್. ಪೊನ್ನಣ್ಣ ಅವರನ್ನು ಭೇಟಿ ಮಾಡಿ ತಮ್ಮ ವಿವಿಧ ಬೇಡಿಕೆಗಳ ಕುರಿತು ಮನವಿ ಸಲ್ಲಿಸಿದರು.

ವಿರಾಜಪೇಟೆಯಲ್ಲಿರುವ ಶಾಸಕರ ಗೃಹ ಕಚೇರಿಯಲ್ಲಿ ಭೇಟಿಯಾದ ಸಮುದಾಯದ ಮುಖಂಡರು ಹಾಗೂ ಸದಸ್ಯರು, ತಮ್ಮ ಪ್ರದೇಶದಲ್ಲಿನ ಕುಡಿಯುವ ನೀರಿನ ಸಮಸ್ಯೆ ಮತ್ತು ಹಕ್ಕುಪತ್ರಗಳಿಗೆ ಸಂಬಂಧಿಸಿದ ಸಮಸ್ಯೆಗಳನ್ನು ಪರಿಹರಿಸುವಂತೆ ಶಾಸಕರ ಗಮನಕ್ಕೆ ತಂದರು.

ಮನವಿಯನ್ನು ಸ್ವೀಕರಿಸಿ ಸಕಾರಾತ್ಮಕವಾಗಿ ಸ್ಪಂದಿಸಿದ ಶಾಸಕರು, ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಚರ್ಚಿಸಿ ಸಮಸ್ಯೆಗಳ ಪರಿಹಾರಕ್ಕೆ ಶೀಘ್ರದಲ್ಲೇ ಅಗತ್ಯ ಕ್ರಮ ಕೈಗೊಳ್ಳುವ ಭರವಸೆ ನೀಡಿದರು.

ಈ ಸಂದರ್ಭದಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪಟ್ಟಡ ರಂಜಿ ಪೂಣಚ್ಚ, ಬ್ಲಾಕ್ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಕಾಳಮಾಂಡ ನೈನಾ ಜಗತ್, ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಯುವ ಕಾಂಗ್ರೆಸ್ ಉಪಾಧ್ಯಕ್ಷ ಉದಯ್ ಮಾದಪ್ಪ, ವಿರಾಜಪೇಟೆ ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷ ಶಬೀರ್, ಪಕ್ಷದ ಮುಖಂಡರಾದ ಕುಂಡಚ್ಚಿರ ಮಂಜು ದೇವಯ್ಯ, ಕಾಳಮಾಂಡ ಜಗತ್, ಬಟ್ಟಕಾಳಂಡ ರಾಜ ದಿನೇಶ್ ಸೇರಿದಂತೆ ಪರಿಶಿಷ್ಟ ಪಂಗಡದ ಸಮುದಾಯದ ಸರ್ವ ಸದಸ್ಯರು ಹಾಗೂ ಪಕ್ಷದ ಮುಖಂಡರು, ಕಾರ್ಯಕರ್ತರು ಉಪಸ್ಥಿತರಿದ್ದರು.