ಪೂಚಕಲ್ ಕಾಲೋನಿಗೆ ಶಾಸಕ ಪೊನ್ನಣ್ಣ ಭೇಟಿ
admincoorgdaily

ಪೊನ್ನಂಪೇಟೆ: ಶ್ರೀಮಂಗಲದಲ್ಲಿ ನಡೆದ ಪ್ರಜಾಸೇವೆ ಅಭಿಯಾನ ಕಾರ್ಯಕ್ರಮದ ಬಳಿಕ ವಿರಾಜಪೇಟೆ ಶಾಸಕ ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಎ.ಎಸ್. ಪೊನ್ನಣ್ಣ ಅವರು ಕುಟ್ಟ ಭಾಗದ ಪೂಚಕಲ್ ಕಾಲೋನಿಗೆ ಭೇಟಿ ನೀಡಿ ಸ್ಥಳೀಯ ನಿವಾಸಿಗಳ ಸಮಸ್ಯೆಗಳನ್ನು ಆಲಿಸಿದರು.
ಈ ವೇಳೆ ನಿವಾಸಿಗಳೊಂದಿಗೆ ಆತ್ಮೀಯವಾಗಿ ಮಾತನಾಡಿದ ಶಾಸಕರು, ಅವರ ಅಹವಾಲುಗಳನ್ನು ಸ್ವೀಕರಿಸಿದರು. ಕಾಲೋನಿಯಲ್ಲಿ ರಸ್ತೆ, ವಿದ್ಯುತ್ ಸೇರಿದಂತೆ ಮೂಲಭೂತ ಸೌಕರ್ಯಗಳನ್ನು ಮತ್ತಷ್ಟು ಸುಧಾರಿಸಬೇಕು ಮತ್ತು ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳಬೇಕು ಎಂದು ನಿವಾಸಿಗಳು ಮನವಿ ಸಲ್ಲಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ಗ್ಯಾರಂಟಿ ಸಮಿತಿ ಅಧ್ಯಕ್ಷ ತಿತೀರ ಧರ್ಮಜ ಉತ್ತಪ್ಪ, ಬ್ಲಾಕ್ ಅಧ್ಯಕ್ಷ ಮಿದೇರಿರ ನವೀನ್, ತಾಲೂಕು ಗ್ಯಾರಂಟಿ ಅಧ್ಯಕ್ಷ ಕಾಳಿಮಡ ಪ್ರಶಾಂತ್, ಕುಟ್ಟ ವಲಯ ಅಧ್ಯಕ್ಷ ರಾಮಕೃಷ್ಣ, ಡಿಸಿಸಿ ಸದಸ್ಯರಾದ ವಿಶು, ಸಂದೀಪ್, ಮುಖಂಡರಾದ ತಿತೀರ ಮಂದಣ್ಣ, ಮುಕಟೀರ ನವೀನ್ ಅಯ್ಯಪ್ಪ, ಅಜ್ಜಿಕುಟ್ಟಿರ ಗಿರೀಶ್, ಕುಂಡಚ್ಚಿರ ಮಂಜು ದೇವಯ್ಯ ಸೇರಿದಂತೆ ಪಕ್ಷದ ಮುಖಂಡರು, ಕಾರ್ಯಕರ್ತರು ಉಪಸ್ಥಿತರಿದ್ದರು.