ಆನೆ ದಾಳಿಗೆ ಬಲಿಯಾದ ಕೇಶವಯ್ಯ ನಿವಾಸಕ್ಕೆ ಶಾಸಕ ಪೊನ್ನಣ್ಣ ಭೇಟಿ - ಕುಟುಂಬಕ್ಕೆ ಸಾಂತ್ವನ
admincoorgdaily

ಪೊನ್ನಂಪೇಟೆ:
ಪೊನ್ನಂಪೇಟೆ ತಾಲೂಕಿನ ದೇವರಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಅಬ್ಬೂರು ತಾರೀಕಟ್ಟೆ ಗ್ರಾಮದಲ್ಲಿ ಆನೆ ದಾಳಿಗೆ ಬಲಿಯಾದ ಉಪ್ಪುಂಡಿ ಕೇಶವಯ್ಯ ಅವರ ನಿವಾಸಕ್ಕೆ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಹಾಗೂ ವಿರಾಜಪೇಟೆ ಶಾಸಕರಾದ ಅಜ್ಜಿಕುಟ್ಟಿರ ಎಸ್. ಪೊನ್ನಣ್ಣ ಅವರು ಭೇಟಿ ನೀಡಿದರು.
ಮೃತರ ಕುಟುಂಬದ ಸದಸ್ಯರನ್ನು ಭೇಟಿಯಾಗಿ ಸಾಂತ್ವನ ಹೇಳಿದ ಶಾಸಕರು, ಧೈರ್ಯ ತುಂಬಿದರು. ಈ ಸಂದರ್ಭದಲ್ಲಿ ಸ್ಥಳೀಯ ಮುಖಂಡರು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.