ತಿತಿಮತಿ ಮರಪಾಲ ಪೈಸಾರಿಗೆ ಶಾಸಕ ಪೊನ್ನಣ್ಣ ಭೇಟಿ!
admincoorgdaily

ಪೊನ್ನಂಪೇಟೆ: ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಪೊನ್ನಂಪೇಟೆ ತಾಲೂಕಿನ ತಿತಿಮತಿ ಗ್ರಾಮದ ಮರಪಾಲ ಪೈಸಾರಿಗೆ ಶಾಸಕರು ಹಾಗೂ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿಗಳಾದ ಶ್ರೀ ಅಜ್ಜಿಕುಟ್ಟಿರ ಎಸ್. ಪೊನ್ನಣ್ಣ ಅವರು ಭೇಟಿ ನೀಡಿದರು.
ಈ ಸಂದರ್ಭದಲ್ಲಿ ಪೈಸಾರಿ ನಿವಾಸಿಗಳೊಂದಿಗೆ ಸಮಾಲೋಚನೆ ನಡೆಸಿದ ಶಾಸಕರು, ಅಲ್ಲಿನ ನಿವಾಸಿಗಳು ಎದುರಿಸುತ್ತಿರುವ ವಿವಿಧ ಸಮಸ್ಯೆಗಳ ಕುರಿತು ಮಾಹಿತಿ ಪಡೆದು, ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಚರ್ಚಿಸಿದರು. ನಿವಾಸಿಗಳ ಸಮಸ್ಯೆಗಳನ್ನು ಆದ್ಯತೆಯ ಮೇರೆಗೆ ಹಂತ ಹಂತವಾಗಿ ಶೀಘ್ರದಲ್ಲೇ ಪರಿಹರಿಸಲು ಅಗತ್ಯ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು.
ಇದೇ ಸಂದರ್ಭದಲ್ಲಿ ಪೈಸಾರಿ ನಿವಾಸಿಗಳು ತಮ್ಮ ಪ್ರದೇಶದಲ್ಲಿ ಅಗತ್ಯವಿರುವ ಮೂಲಭೂತ ಸೌಕರ್ಯಗಳನ್ನು ಒದಗಿಸುವಂತೆ ಶಾಸಕರಿಗೆ ಮನವಿ ಸಲ್ಲಿಸಿದರು. ನಿವಾಸಿಗಳ ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸಿದ ಶಾಸಕರು, ಈ ಕುರಿತು ಸರ್ಕಾರದ ಮಟ್ಟದಲ್ಲಿ ಚರ್ಚಿಸಿ, ಅಲ್ಲಿನ ನಿವಾಸಿಗಳಿಗೆ ಅಗತ್ಯ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಲು ಕ್ರಮ ಕೈಗೊಳ್ಳುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸುವುದಾಗಿ ತಿಳಿಸಿದರು.
ಈ ಸಂದರ್ಭದಲ್ಲಿ ಕ್ರೀಡಾ ಪ್ರಾಧಿಕಾರ ಉಪಾಧ್ಯಕ್ಷರಾದ ಚೆಪ್ಪುಡೀರ ಅರುಣ್ ಮಾಚಯ್ಯ, ಬ್ಲಾಕ್ ಅಧ್ಯಕ್ಷರಾದ ಮಿದೇರೀರ ನವೀನ್, ಭಾಗಮಂಡಲ ಹಾಗೂ ತಲಕಾವೇರಿ ದೇವಾಲಯದ ಆಡಳಿತ ಮಂಡಳಿ ಅಧ್ಯಕ್ಷರಾದ ಬಾನಂಡ ಪ್ರತ್ಯು, ಪಕ್ಷದ ವಕ್ತರಾದ ಟಾಟು ಮೊಣಪ್ಪ, ವಲಯ ಅಧ್ಯಕ್ಷರಾದ ನವೀನ್, ಜಿಲ್ಲಾ ಗ್ಯಾರಂಟಿ ಅನುಷ್ಠಾನ ಸಮಿತಿ ಉಪಾಧ್ಯಕ್ಷರಾದ ಪಂಕಜ್, ಡಿಸಿಸಿ ಸದಸ್ಯರಾದ ವಿನಯ್ ಕುಮಾರ್, ಧರ್ಮ ಗುರುಗಳು, ತಿತಿಮತಿ ಮಹಿಳಾ ಕಾಂಗ್ರೆಸ್ ವಲಯ ಅಧ್ಯಕ್ಷರಾದ ರೋಶಿಣಿ, ಅನುಷ್ಠಾನ ಸಮಿತಿ ತಾಲ್ಲೂಕು ಸದಸ್ಯರಾದ ಫಿಲೋಮಿನ, ಮಾಜಿ ಗ್ರಾಮ ಪಂಚಾಯಿತಿ ಸದಸ್ಯರಾದ ಅಫ್ರೋಜ್, ಮಾಜಿ ಗ್ರಾಮ ಪಂಚಾಯತ್ ಸದಸ್ಯರಾದ ಸುಬ್ರು, ಸತೀಶ್, ಪಕ್ಷದ ಮುಖಂಡರು, ಕಾರ್ಯಕರ್ತರು, ಸ್ಥಳೀಯ ನಿವಾಸಿಗಳು ಹಾಗೂ ಪ್ರಮುಖರು ಉಪಸ್ಥಿತರಿದ್ದರು.