ಉಮ್ಮರ್ ಮಾಸ್ಟರ್ ಮನೆಗೆ ಶಾಸಕ ಪೊನ್ನಣ್ಣ ಭೇಟಿ: ಕುಟುಂಬಸ್ಥರಿಗೆ ಸಾಂತ್ವನ
admincoorgdaily

ನಾಪೋಕ್ಲು, ಸೆ.6: ರಾಷ್ಟ್ರ ಪ್ರಶಸ್ತಿ ವಿಜೇತ ಎಡಪಾಲದ ಉಮ್ಮರ್ ಮಾಸ್ಟರ್ ಅವರ ಪುತ್ರಿ ಇತ್ತೀಚೆಗೆ ನಿಧನರಾಗಿದ್ದು, ಅವರ ನಿವಾಸಕ್ಕೆ ವಿರಾಜಪೇಟೆ ಶಾಸಕ ಹಾಗೂ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಎ.ಎಸ್. ಪೊನ್ನಣ್ಣ ಅವರು ಶನಿವಾರ ಭೇಟಿ ನೀಡಿ ಕುಟುಂಬಕ್ಕೆ ಸಾಂತ್ವನ ಹೇಳಿದರು.
ಈ ಸಂದರ್ಭ ನಾಪೋಕ್ಲು ಬ್ಲಾಕ್ ಕಾರ್ಯಾಧ್ಯಕ್ಷ ಸೌಕತ್ ಅಲಿ, ವಲಯ ಅಧ್ಯಕ್ಷ ಕೋಡಿರ ವಿನೋದ್ ನಾಣಯ್ಯ, ಮುಖಂಡರಾದ ಎಡಪಾಲ ಶಾಫಿ, ಮಹಮ್ಮದ್ ಮೊದಲಾದವರು ಇದ್ದರು.