Kodagu

ಭಾಗಮಂಡಲದಲ್ಲಿ ಸಮುದಾಯ ಭವನ ಕಾಮಗಾರಿ ವೀಕ್ಷಿಸಿದ ಶಾಸಕ ಪೊನ್ನಣ್ಣ

admincoorgdaily

ಭಾಗಮಂಡಲದಲ್ಲಿ ಸಮುದಾಯ ಭವನ ಕಾಮಗಾರಿ ವೀಕ್ಷಿಸಿದ ಶಾಸಕ ಪೊನ್ನಣ್ಣ
ಭಾಗಮಂಡಲ; ಭಾಗಮಂಡಲದಲ್ಲಿ ಕಾವೇರಿ ಹಿತರಕ್ಷಣಾ ಸಮಿತಿಯ ಸಮುದಾಯ ಭವನ ಕಾಮಗಾರಿ ಪ್ರಗತಿಯನ್ನು ಶಾಸಕರು ಹಾಗೂ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಅಜ್ಜಿಕುಟ್ಟಿರ ಎಸ್. ಪೊನ್ನಣ್ಣ ವೀಕ್ಷಿಸಿದರು.

ಶಾಸಕರ ಅನುದಾನದಲ್ಲಿ ನಿರ್ಮಾಣವಾಗುತ್ತಿರುವ ಭವನದ ಕಾಮಗಾರಿಯನ್ನು ಪರಿಶೀಲಿಸಿ, ಶೀಘ್ರ ಕಾಮಗಾರಿ ಪೂರ್ಣಗೊಳಿಸುವಂತೆ ಸೂಚನೆ ನೀಡಿದರು.

ಈ ಸಂದರ್ಭದಲ್ಲಿ ಮಾಜಿ ವಿಧಾನ ಪರಿಷತ್ ಸದಸ್ಯೆ ವೀಣಾ ಅಚ್ಚಯ್ಯ, ಕಾವೇರಿ ಹಿತರಕ್ಷಣಾ ಸಮಿತಿ ಅಧ್ಯಕ್ಷ ಮುದಂಡ ದೇವಯ್ಯ, ಉಪಾಧ್ಯಕ್ಷ ಚೆಪ್ಪುಡೀರ ಪೊನ್ನಪ್ಪ, ನಿರ್ದೇಶಕರಾದ ಸತ್ಯ ಗಣಪತಿ, ಮನು, ಕುಮಾರ್, ಪ್ರಭು, ಮಡಿಕೇರಿ ತಾಲೂಕು ಕೆಡಿಪಿ ಸದಸ್ಯ ಬಾಚಮಾಂಡ ಲವ ಚಿಣ್ಣಪ್ಪ, ಮಾಜಿ ಜಿಲ್ಲಾ ಪಂಚಾಯಿತಿ ಸದಸ್ಯ ಬಾನಂಡ ಪ್ರತ್ಯು, ಕಕ್ಕಬೆ ಪಂಚಾಯಿತಿ ಮಾಜಿ ಅಧ್ಯಕ್ಷ ಹಾಗೂ ವಲಯ ಅಧ್ಯಕ್ಷ ಕಲಿಯಂಡ ಸಂಪನ್ ಅಯ್ಯಪ್ಪ, ಕುದುಪಾಜೆ ಪ್ರಕಾಶ್, ಸೂರಜ್ ಹೊಸೂರು, ಸತೀಶ್, ಕುಂಡಚ್ಚಿರ ಮಂಜು ದೇವಯ್ಯ, ಕೊಡವ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಅಜ್ಜಿನಿಕಂಡ ಮಹೇಶ್ ನಾಚಯ್ಯ, ನಿರೂಪ್, ಪಕ್ಷದ ಮುಖಂಡರು ಹಾಗೂ ಸ್ಥಳೀಯ ಪ್ರಮುಖರು ಉಪಸ್ಥಿತರಿದ್ದರು.