ಶಾಸಕ ಪೊನ್ನಣ್ಣ ಸಮ್ಮುಖದಲ್ಲಿ ಕಾಂಗ್ರೆಸ್ ಸೇರಿದ ಅಮ್ಮತ್ತಿ ಪುಲಿಯೇರಿಯ 60ಕ್ಕೂ ಅಧಿಕ ಮಂದಿ
admincoorgdaily

ಸಿದ್ದಾಪುರ: ಅಮ್ಮತ್ತಿ ಪುಲಿಯೇರಿ ಗ್ರಾಮದ ಮಹಿಳೆಯರು ಹಾಗೂ ಯುವಕರು ಸೇರಿದಂತೆ 60ಕ್ಕೂ ಹೆಚ್ಚು ಮಂದಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು.
-
ವಿರಾಜಪೇಟೆ ಕ್ಷೇತ್ರದ ಶಾಸಕ ಹಾಗೂ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಎ.ಎಸ್. ಪೊನ್ನಣ್ಣ ಅವರ ವಿರಾಜಪೇಟೆಯ ಗೃಹ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಾಮೂಹಿಕವಾಗಿ ಕಾಂಗ್ರೆಸ್ ಸೇರಿದರು.
ಈ ಸಂದರ್ಭದಲ್ಲಿ ವಿರಾಜಪೇಟೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಂಜಿ ಪೂಣಚ್ಚ,ಪ್ರಮುಖರಾದ ನೌಶಾದ್, ಅನಿಲ್ ಕುಮಾರ್, ಉಮ್ಮರ್, ಪ್ರೇಮಾ, ಫಾಝಿಲ್, ವೆಂಕಟೇಶ್, ರಾಜು ಸೇರಿದಂತೆ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.