ವಿದ್ಯುತ್ ಅವಘಡದಲ್ಲಿ ಸಾವನ್ನಪ್ಪಿದ ನಿತಿನ್ ಮನೆಗೆ ಸಂಸದ ಯದುವೀರ್ ಒಡೆಯರ್ ಭೇಟಿ:ಕುಟುಂಬಸ್ಥರಿಗೆ ಸಾಂತ್ವನ

ಮಡಿಕೇರಿ:ಸಂಸದ ಯದುವೀರ್ ಒಡೆಯರ್ ಅವರು ವಿದ್ಯುತ್ ಸ್ಪರ್ಷಗೊಂಡು ಮೃತಪಟ್ಟ ಮರಗೋಡು ಗ್ರಾಮದ ಹುಲಿತಾಳ ನಿವಾಸಿ ನಿತಿನ್ ಮನೆಗೆ ಭೇಟಿ ನೀಡಿ ಕುಟುಂಬ ಸದಸ್ಯರಿಗೆ ಸಾಂತ್ವಾನ ಹೇಳಿದರು. ಕುಟುಂಬದ ಸದಸ್ಯರೊಂದಿಗೆ ಮಾತನಾಡಿ ಅವರ ಕೆಲವು ಸಮಸ್ಯೆಗಳನ್ನು ಬಗೆಹರಿಸುವ ಭರವಸೆ ನೀಡಿದರು. ಈ ಸಂದರ್ಭ ಮಾಜಿ ಶಾಸಕ ಕೆ ಜಿ ಬೋಪಯ್ಯ, ಜಿಲ್ಲಾಧ್ಯಕ್ಷ ನಾಪಂಡ ರವಿ ಕಾಳಪ್ಪ, ಉಪಾಧ್ಯಕ್ಷ ಕಾಂಗೀರ ಸತೀಶ್ ,ಪ್ರ.ಕಾರ್ಯದರ್ಶಿ ಮಹೇಶ್ ಜೈನಿ, ಮಡಿಕೇರಿ ನಗರ ಮಂಡಲ ಅಧ್ಯಕ್ಷ ಉಮೇಶ್ ಸುಬ್ರಮಣಿ, ಮಡಿಕೇರಿ ನಗರ ಪ್ರಧಾನ ಕಾರ್ಯದರ್ಶಿ ಕವನ್ ಕಾವೇರಪ್ಪ, ಮಡಿಕೇರಿ ಗ್ರಾಮಾಂತರ ಪ್ರ.ಕಾರ್ಯದರ್ಶಿ ಡೀನ್ ಬೋಪಣ್ಣ, ಎಸ್ ಸಿ ಮೋರ್ಚಾ ಜಿಲ್ಲಾಧ್ಯಕ್ಷ ರವಿ ಪಾಲ್ಗೊಂಡರು.