Kodagu

ಮೂರ್ನಾಡು ವಲಯ ಕಾಂಗ್ರೆಸ್ ಸಭೆ;ಪರಿಣಾಮಕಾರಿಯಾಗಿ ಪಕ್ಷ ಸಂಘಟಣೆಗೆ ಧರ್ಮಜ ಉತ್ತಪ್ಪ ಕರೆ

admincoorgdaily

ಮೂರ್ನಾಡು ವಲಯ ಕಾಂಗ್ರೆಸ್ ಸಭೆ;ಪರಿಣಾಮಕಾರಿಯಾಗಿ ಪಕ್ಷ ಸಂಘಟಣೆಗೆ ಧರ್ಮಜ  ಉತ್ತಪ್ಪ ಕರೆ
ಮಡಿಕೇರಿ;
ಕಾಂಗ್ರೆಸ್ ಪಕ್ಷವನ್ನು ಜಿಲ್ಲೆಯಲ್ಲಿ ಅತ್ಯಂತ ವ್ಯವಸ್ಥಿತವಾಗಿ ಮತ್ತು ಪರಿಣಾಮಕಾರಿಯಾಗಿ ಸಂಘಟನೆ ಮಾಡುವಂತೆ ಕಾರ್ಯಕರ್ತರಿಗೆ ಕೊಡಗು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರು ಹಾಗೂ ಜಿಲ್ಲಾ ಗ್ಯಾರೆಂಟಿ ಅನುಷ್ಠಾನ ಸಮಿತಿ ಅಧ್ಯಕ್ಷರಾದ ತೀತಿರ ಧರ್ಮಜಾ ಉತ್ತಪ್ಪ ಕರೆ ನೀಡಿದ್ದಾರೆ.

ಮಡಿಕೇರಿ ವಿಧಾನ ಸಭಾ ಕ್ಷೇತ್ರದ ಮೂರ್ನಾಡು ವಲಯ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದ ಧರ್ಮಜ ಉತ್ತಪ್ಪ ನವರು ಅತೀ ಹೆಚ್ಚು ಅಭಿವೃದ್ಧಿ ಕಾರ್ಯಗಳು ಕಾಂಗ್ರೆಸ್ ಪಕ್ಷದ ಶಾಸಕರು ಅಧಿಕಾರಕ್ಕೆ ಬಂದ ನಂತರ ನಡೆಯುತ್ತಿದ್ದು ಮುಂದಿನ ಬಾರಿಗೂ ಜಿಲ್ಲೆಯಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಬೇಕು ಎಂಬ ಒಲವು ಸಾರ್ವಜನಿಕವಾಗಿ ವ್ಯಕ್ತವಾಗುತ್ತಿದ್ದು ಈ ನಿಟ್ಟಿನಲ್ಲಿ ಪಕ್ಷದ ಸಂಘಟನೆ ಅತ್ಯಗತ್ಯವಾಗಿದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.

ಮಡಿಕೇರಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಹೆಚ್.ಎ.ಹಂಸ ನವರು ಮಾತನಾಡಿ ಕ್ಷೇತ್ರದ ಶಾಸಕರಾದ ಡಾ ಮಂತರ್ ಗೌಡ ರವರು ಮೂರ್ನಾಡು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಅಭಿವೃದ್ಧಿ ಕಾರ್ಯಗಳಿಗೆ ಕೋಟ್ಯಾಂತರ ರೂಗಳ ಅನುದಾನವನ್ನು ಒದಗಿಸಿದಾಗಿ ತಿಳಿಸಿದರು.ಅಕ್ಟೋಬರ್ ತಿಂಗಳಿನಲ್ಲಿ
ಮೂರ್ನಾಡು ಪಟ್ಟಣದಲ್ಲಿ ಜಿಲ್ಲಾಮಟ್ಟದ ಕಾಂಗ್ರೆಸ್ ಸಮಾವೇಶ ನಡೆಸಲಾಗುವುದು ಎಂದು ಹೇಳಿದರು.
ಗ್ರಾಮ ಪಂಚಾಯತ್ ಮಟ್ಟದ ಗ್ಯಾರಂಟಿ ಸಮಿತಿ ರಚನೆಗೆ ವಲಯ ಕಾಂಗ್ರೆಸ್ ಅಧ್ಯಕ್ಷರಿಗೆ ಸೂಚನೆ ನೀಡಿದರು.

ಜಿಲ್ಲಾ ಕಾಂಗ್ರೆಸ್ ವಕ್ತಾರರು ಹಾಗೂ ವಾರ್ ರೂಂ ಸಂಚಾಲಕರಾದ ತೆನ್ನಿರ ಮೈನಾ ರವರು ಎಸ್.ಐ.ಆರ್ ಪ್ರಗತಿ ಬಗ್ಗೆ ಮಾಹಿತಿ ನೀಡಿದರು.ಜಿಲ್ಲೆಯ ಪ್ರತಿಯೊಬ್ಬ ಮತದಾರರು ಕೂಡ ಮತದಾನದ ಹಕ್ಕನ್ನು ಕಳೆದುಕೊಳ್ಳದ ಹಾಗೆ ಜಾಗೃತಿ ವಹಿಸಲಾಗಿದೆ ಎಂದು ತಿಳಿಸಿದರು.
ಮಡಿಕೇರಿ ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷರಾದ ಕವನ್ ಕೊತ್ತೋಳಿ ಭಾರತ್ ಜೋಡೋ ಯುವಕ ಸಂಘದ ಬಗ್ಗೆ ಮಾಹಿತಿ ನೀಡಿದರು.

ಇದೇ ಸಂಧರ್ಭದಲ್ಲಿ ಎ.ಐ.ಸಿ.ಸಿ ಸೃಜನ್ ಅಭಿಯಾನದ ನಂತರ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿ ಎರಡನೇ ಬಾರಿಗೆ ಮುಂದುವರಿದಿರುವ ಧರ್ಮಜ ಉತ್ತಪ್ಪನವರನ್ನು ವಲಯ ಕಾಂಗ್ರೆಸ್ ವತಿಯಿಂದ ಸನ್ಮಾನಿಸಲಾಯಿತು.

ವಲಯ ಕಾಂಗ್ರೆಸ್ ಅಧ್ಯಕ್ಷರಾದ ಕೇಶವ ರವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ  ಡಿ.ಸಿ.ಸಿ ಸದಸ್ಯರಾದ ಮುಂಡಂಡ ಭಾಗೇಶ್,
ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷರಾದ ಜಮ್ಮಡ ಸೋಮಣ್ಣ,ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ರವೂಫ್ ಶೇಖ್,
ವಲಯ ಕಾಂಗ್ರೆಸ್ ಉಪಾಧ್ಯಕ್ಷರಾದ ಮಹಮದ್ ಆಲಿ,ಯುವ ಕಾಂಗ್ರೆಸ್ ಜಿಲ್ಲಾ ಪದಾಧಿಕಾರಿಗಳಾದ ಇಟ್ಟೀರ ಭವಿನ್, ಪ್ರಮುಖರಾದ ರಘು ಭೈರ,ಧನಂಜಯ್,
ಶಿವಕುಮಾರ್ ಎ.ಆರ್, ಭಾಗ್ಯ, ರಾಧ,
ಶಿವು ಬಾಡಗ,ಸಾದಿಕ್ ಎಂ.ಎಂ.
,ಸೋಹೇಲ್,ವಸಂತ ಪಾರೆ,
ಸೇರಿದಂತೆ ಕಾರ್ಯಕರ್ತರು ಮುಖಂಡರು ಉಪಸ್ಥಿತರಿದ್ದರು.