ಮೈಸೂರು ಕಾಫಿ ಸಂಸ್ಕರಣ, ಮಾರಾಟ ಮತ್ತು ಉಗ್ರಾಣ ಸಹಕಾರ ಸಂಘದ ಆಡಳಿತ ಮಂಡಳಿ ಸಭೆ
admincoorgdaily

ಮೈಸೂರು: ದಿ ಮೈಸೂರು ಕಾಫಿ ಸಂಸ್ಕರಣ, ಮಾರಾಟ ಮತ್ತು ಉಗ್ರಾಣ ಸಹಕಾರ ಸಂಘ ನಿಯಮಿತದ ಆಡಳಿತ ಮಂಡಳಿಯ ಮಾಸಿಕ ಸಭೆಯು ಮೈಸೂರಿನ ಸಂಘದ ಸಭಾಂಗಣದಲ್ಲಿ ನಡೆಯಿತು.
ಸಂಘದ ಅಧ್ಯಕ್ಷರೂ ಆಗಿರುವ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕರು ಹಾಗೂ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಎ.ಎಸ್. ಪೊನ್ನಣ್ಣ ಅವರು ಅಧ್ಯಕ್ಷತೆ ವಹಿಸಿ ಮಾಸಿಕ ವರದಿಯನ್ನು ಪರಿಶೀಲಿಸಿದರು.
ಸಂಘದ ಇತರ ನಿರ್ದೇಶಕರು ಭಾಗವಹಿಸಿದ್ದ ಸಭೆಯಲ್ಲಿ ಹಿಂದಿನ ವರದಿಯನ್ನು ಪರಿಶೀಲಿಸಿ, ಮುಂದಿನ ಅವಧಿಯಲ್ಲಿ ಕೈಗೊಳ್ಳಬೇಕಾದ ವಿವಿಧ ಕ್ರಮಗಳ ಬಗ್ಗೆ ಚರ್ಚಿಸಲಾಯಿತು. ಸಂಘದ ಅಭಿವೃದ್ಧಿಗೆ ಕೈಗೊಳ್ಳಬೇಕಾದ ಕಾರ್ಯತಂತ್ರಗಳ ಬಗ್ಗೆ ಕುಲಂಕುಷವಾಗಿ ಮಾತುಕತೆ ನಡೆಸಲಾಯಿತು.
ಈ ಸಭೆಯಲ್ಲಿ ಉಪಾಧ್ಯಕ್ಷ ಜಿ.ಎಸ್. ಪ್ರಭುದೇವ, ನಿರ್ದೇಶಕರುಗಳು ಹಾಗೂ ಪ್ರಮುಖರು ಉಪಸ್ಥಿತರಿದ್ದರು.