ನಾಪೋಕ್ಲು: ಕರ್ನಾಟಕ ಪಬ್ಲಿಕ್ ಶಾಲೆಯಲ್ಲಿ ಮಾದಕ ವಸ್ತುಗಳ ಬಗ್ಗೆ ಜಾಗೃತಿ

ನಾಪೋಕ್ಲು: ಕರ್ನಾಟಕ ಪಬ್ಲಿಕ್ ಶಾಲೆಯಲ್ಲಿ ಮಾದಕ ವಸ್ತುಗಳ ಬಗ್ಗೆ ಜಾಗೃತಿ

ವರದಿ:ಝಕರಿಯ ನಾಪೋಕ್ಲು

ನಾಪೋಕ್ಲು :ನಾಪೋಕ್ಲುವಿನ ಕರ್ನಾಟಕ ಪಬ್ಲಿಕ್ ಶಾಲೆಯಲ್ಲಿ ಪೋಲಿಸ್ ಇಲಾಖೆಯಿಂದ ವಿದ್ಯಾರ್ಥಿಗಳಿಗೆ ಮಾದಕ ವಸ್ತುಗಳ ಸೇವನೆ ಮತ್ತು ಕಾನೂನಿನ ಕುರಿತು ಜಾಗೃತಿ ಮೂಡಿಸುವ ಕಾರ್ಯಕ್ರಮ ನಡೆಯಿತು. 

ಶಾಲೆಯ ಸಭಾಂಗಣದಲ್ಲಿ ಆಯೋಜಿಸಲಾದ ಕಾರ್ಯಕ್ರಮದಲ್ಲಿ ನಾಪೋಕ್ಲು ಠಾಣಾಧಿಕಾರಿ ರಾಘವೇಂದ್ರ ಅವರು ವಿದ್ಯಾರ್ಥಿಗಳಿಗೆ ಪೋಕ್ಸೋ ಕಾಯ್ದೆ, ಬಾಲ್ಯ ವಿವಾಹ ಕಾಯ್ದೆ,ಮಾದಕ ವಸ್ತುಗಳ ಬಳಕೆಯಿಂದ ಉಂಟಾಗುವ ದುಷ್ಪರಿಣಾಮ, ಸಂಚಾರ ನಿಯಮ ಮತ್ತು ಸುರಕ್ಷತೆ, ಸೈಬರ್ ಸುರಕ್ಷತೆ ಮುಂತಾದ ವಿಷಯಗಳ ಬಗ್ಗೆ ಅರಿವು ಮೂಡಿಸಿದರು.ಈ ಸಂದರ್ಭ ಶಾಲೆಯ ಶಿಕ್ಷಕರು,ವಿದ್ಯಾರ್ಥಿಗಳು, ಪೊಲೀಸ್ ಸಿಬ್ಬಂದಿಗಳು ಹಾಜರಿದ್ದರು.