ನಾಪೋಕ್ಲು; ಕಕ್ಕುಂದಕಾಡು ಶ್ರೀ ದೇವಸ್ಥಾನದ ಜೀರ್ಣೋದ್ಧಾರಕ್ಕೆ ಧರ್ಮಸ್ಥಳ ಸಂಘದಿಂದ 2 ಲಕ್ಷ ರೂ.ನೆರವು
admincoorgdaily

ನಾಪೋಕ್ಲು: ನಾಪೋಕ್ಲು ಸಮೀಪದ ಕಕ್ಕುಂದಕಾಡು ಶ್ರೀ ವೆಂಕಟೇಶ್ವರ ದೇವಸ್ಥಾನದ ಜೀರ್ಣೋದ್ಧಾರ ಕಾರ್ಯಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ 2 ಲಕ್ಷ ರೂಪಾಯಿಗಳ ಧನಸಹಾಯ ನೀಡಲಾಯಿತು.
ದೇವಸ್ಥಾನದ ಅಭಿವೃದ್ಧಿ ಹಾಗೂ ಧಾರ್ಮಿಕ ಕಾರ್ಯಗಳಿಗೆ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿಗಳಾದ ಡಾ. ವೀರೇಂದ್ರ ಹೆಗ್ಗಡೆಯವರು ಮಂಜೂರು ಮಾಡಿದ 2ಲಕ್ಷರೂಗಳ ಚೆಕ್ ಅನ್ನು ದೇವಾಲಯದ ಆಡಳಿತ ಮಂಡಳಿ ಪದಾಧಿಕಾರಿಗಳಿಗೆ ಧರ್ಮಸ್ಥಳ ಸಂಘದ ಪದಾಧಿಕಾರಿಗಳು ಹಸ್ತಾಂತರಿಸಿದರು.
ಸಂಘದ ಸಹಕಾರಕ್ಕೆ ದೇವಸ್ಥಾನದ ಆಡಳಿತ ಮಂಡಳಿ ಹಾಗೂ ಭಕ್ತಾಧಿಗಳು ಕೃತಜ್ಞತೆ ಸಲ್ಲಿಸಿದ್ದಾರೆ.
ಈ ಸಂದರ್ಭ ಕಾರ್ಯಕ್ರಮದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ನಿರ್ದೇಶಕರಾದ ವಿಠಲ್ ಸಾಲಿಯಾನ್, ಯೋಜನಾಧಿಕಾರಿ ಪುರುಷೋತ್ತಮ್, ಸೇವಾ ಪ್ರತಿನಿಧಿ ಉಮಾ ಲಕ್ಷ್ಮಿ, ದೇವಾಲಯದ ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷರಾದ ಗೋಪಾಲ,ದೇವಾಲಯದ ಕಾರ್ಯದರ್ಶಿ ಹಾಗೂ ಮಡಿಕೇರಿ ತಾಲೂಕು ಶೌರ್ಯ ಘಟಕದ ಮಾಸ್ಟರ್ ಬಾಳೆಯಡ ದಿವ್ಯಾ ಮಂದಪ್ಪ, ಖಜಾಂಚಿ ಸೂರ್ಯ ಕುಮಾರ್, ಅರ್ಚಕರಾದ ಸುಧೀರ್ ಭಟ್ ಹಾಗೂ ಮತ್ತಿತರರು ಹಾಜರಿದ್ದರು.
ವರದಿ :ಝಕರಿಯ ನಾಪೋಕ್ಲು