ನಾಪೋಕ್ಲು ಬೇತು ಮಕ್ಕಿಕಡವು ಕಾಂಕ್ರೀಟ್ ರಸ್ತೆ ಕಾಮಗಾರಿ ಆರಂಭ:ನ.25ರವರೆಗೆ ವಾಹನ ಸಂಚಾರ ನಿರ್ಬಂಧ
admincoorgdaily

ನಾಪೋಕ್ಲು: ನಾಪೋಕ್ಲು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬೇತು ಗ್ರಾಮದಿಂದ ಬಲಮುರಿ ಹಾಗೂ ಪಾರಾಣೆ ಗ್ರಾಮಗಳಿಗೆ ಸಂಪರ್ಕ ಕಲ್ಪಿಸುವ ಮಕ್ಕಿಕಡವು ಎಂಬಲ್ಲಿ ಕಾಂಕ್ರೀಟ್ ರಸ್ತೆ ನಿರ್ಮಾಣ ಕಾಮಗಾರಿ ಪ್ರಾರಂಭಗೊಂಡಿದೆ.
ರಸ್ತೆ ಕಾಮಗಾರಿ ನಡೆಯುತ್ತಿರುವ ಹಿನ್ನೆಲೆಯಲ್ಲಿ ಸಾರ್ವಜನಿಕರ ಸುರಕ್ಷತೆ ಹಾಗೂ ಕಾಮಗಾರಿ ಸುಗಮವಾಗಿ ನಡೆಯುವ ಉದ್ದೇಶದಿಂದ ನ. 25ರವರೆಗೆ ಈ ರಸ್ತೆಯಲ್ಲಿ ವಾಹನ ಸಂಚಾರವನ್ನು ನಿರ್ಬಂಧಿಸಲಾಗಿದೆ.
ಆದ್ದರಿಂದ ಈ ಮಾರ್ಗವಾಗಿ ಸಂಚರಿಸುವ ವಾಹನ ಸವಾರರು ಪರ್ಯಾಯ ರಸ್ತೆಗಳನ್ನು ಬಳಸುವಂತೆ ನಾಪೋಕ್ಲು ಗ್ರಾಮ ಪಂಚಾಯಿತಿ ಮಾಜಿ ಉಪಾಧ್ಯಕ್ಷ ಹಾಗೂ ಕಾಮಗಾರಿಯ ಉಸ್ತುವಾರಿ ಕಾಳೆಯಂಡ ಸಾಬ ತಿಮ್ಮಯ್ಯ ಅವರು ಮನವಿ ಮಾಡಿದ್ದಾರೆ.
ವರದಿ :ಝಕರಿಯ ನಾಪೋಕ್ಲು