Kodagu

ನಾಪೋಕ್ಲು; 1 ಕೋಟಿ 50 ಲಕ್ಷ ವೆಚ್ಚದ ರಸ್ತೆ ಕಾಮಗಾರಿಗೆ ಭೂಮಿಪೂಜೆ

admincoorgdaily

ನಾಪೋಕ್ಲು; 1 ಕೋಟಿ 50 ಲಕ್ಷ ವೆಚ್ಚದ ರಸ್ತೆ ಕಾಮಗಾರಿಗೆ ಭೂಮಿಪೂಜೆ
ಮಡಿಕೇರಿ; ತಾಲ್ಲೂಕಿನ ನಾಪೋಕ್ಲು ಭಾಗದಲ್ಲಿ ₹1 ಕೋಟಿ 50 ಲಕ್ಷ ವೆಚ್ಚದಲ್ಲಿ ಕೈಗೆತ್ತಿಕೊಳ್ಳಲಾಗುತ್ತಿರುವ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಶಾಸಕರು ಹಾಗೂ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿಗಳಾದ ಅಜ್ಜಿಕುಟ್ಟಿರ ಎಸ್. ಪೊನ್ನಣ್ಣ ಅವರು ಇಂದು ಭೂಮಿಪೂಜೆ ನೆರವೇರಿಸಿದರು.

ಈ ಸಂದರ್ಭದಲ್ಲಿ ನಾಪೋಕ್ಲು ಬ್ಲಾಕ್ ಅಧ್ಯಕ್ಷ ಸೌಕತ್ ಅಲಿ, ಡಿಸಿಸಿ ಉಪಾಧ್ಯಕ್ಷ ಅಬ್ದುಲ್ ರೆಹಮಾನ್, ವಲಯ ಅಧ್ಯಕ್ಷ ಕುಶಾಲಪ್ಪ, ಮಾಜಿ ಬ್ಲಾಕ್ ಅಧ್ಯಕ್ಷ ಇಸ್ಮಾಯಿಲ್, ಅಕ್ರಮ ಸಕ್ರಮ ಅಧ್ಯಕ್ಷ ನೇರವಂಡ ಉಮೇಶ್, ಕಕ್ಕಬೆ ಮಾಜಿ ಗ್ರಾಮ ಪಂಚಾಯತ್ ಅಧ್ಯಕ್ಷ ಹಾಗೂ ಕಕ್ಕಬೆ ವಲಯ ಅಧ್ಯಕ್ಷ ಕಲಿಯಂಡ ಸಂಪನ್ ಅಯ್ಯಪ್ಪ, ಗ್ರಾಮ ಪಂಚಾಯತ್ ಸದಸ್ಯೆ ಅಮೀನ, ಮಾಜಿ ಅಧ್ಯಕ್ಷೆ ವನಜಾಕ್ಷಿ, ಉಪಾಧ್ಯಕ್ಷ ಬೇಬಣ್ಣ, ಗ್ರಾಮ ಪಂಚಾಯತ್ ಸದಸ್ಯ ಮಮ್ಮಾದ್, ಮಾಜಿ ಸದಸ್ಯರಾದ ಅರುಣ್ ಬೇಬ, ಹೇಮಾವತಿ, ಸಾಬ, ಹ್ಯಾರಿಸ್, ತಮ್ಮಿ, ಅಜಿಜ್, ಪಕ್ಷದ ಮುಖಂಡರಾದ ತಮ್ಮಯ್ಯ, ದಯಾ ಚಿನ್ನಪ್ಪ, ಪ್ರಕಾಶ್, ಮಿಥುನ್ ಮಾಚಯ್ಯ, ಮಚುರ ರವೀಂದ್ರ, ವಾಸಿಮ್, ಕುಂಡಚ್ಚಿರ ಮಂಜು ದೇವಯ್ಯ, ಝುಬೈರ್, ಸಿರಾಜ್ ಪರವಂಡ ಮತ್ತು ಹಲವಾರು ಪಕ್ಷದ ಮುಖಂಡರು, ಕಾರ್ಯಕರ್ತರು, ಸ್ಥಳೀಯ ಪ್ರಮುಖರು ಉಪಸ್ಥಿತರಿದ್ದರು.