Kodagu

ನಾಪೋಕ್ಲು; ಹಳೆತಾಲೂಕು ಅಂಗನವಾಡಿ ಕೇಂದ್ರದಲ್ಲಿ ಯಶಸ್ವಿಯಾಗಿ ನಡೆದ ಪೋಷಣ್ ಮಾಸಾಚರಣೆ ಕಾರ್ಯಕ್ರಮ

admincoorgdaily

ನಾಪೋಕ್ಲು;  ಹಳೆತಾಲೂಕು ಅಂಗನವಾಡಿ ಕೇಂದ್ರದಲ್ಲಿ ಯಶಸ್ವಿಯಾಗಿ ನಡೆದ ಪೋಷಣ್ ಮಾಸಾಚರಣೆ ಕಾರ್ಯಕ್ರಮ
ವರದಿ :ಝಕರಿಯ ನಾಪೋಕ್ಲು 

ನಾಪೋಕ್ಲು :ನಾಪೋಕ್ಲು ಬಳಿಯ ಹಳೆತಾಲೂಕು ಅಂಗನವಾಡಿ ಕೇಂದ್ರದಲ್ಲಿ ಪೋಷಣ್ ಅಭಿಯಾನ ಮಾಸಾಚರಣೆ ಕಾರ್ಯಕ್ರಮ ಯಶಸ್ವಿಯಾಗಿ ನಡೆಯಿತು.

ಸ್ಥಳದಾನಿಗಳು ಹಾಗೂ ಗ್ರಾಮ ಪಂಚಾಯಿತಿ ಮಾಜಿ ಸದಸ್ಯ ಕುಲ್ಲೇಟಿರ ಅರುಣ್ ಬೇಬ ಅವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮವನ್ನು ಜಿಲ್ಲಾ ಮಟ್ಟದ ಉಪನಿರ್ದೇಶಕಿ ಸುಮಂಗಲ ಜಿ.ಹಿರೇಮನಿ ಉದ್ಘಾಟಿಸಿ  ಮಾತನಾಡಿ  ಪೋಷಣ್ ಅಭಿಯಾನದ ಉದ್ದೇಶ ಹಾಗೂ ಮಕ್ಕಳ ಆರೋಗ್ಯಕರ ಬೆಳವಣಿಗೆಗೆ ಪೌಷ್ಟಿಕ ಆಹಾರದ ಮಹತ್ವದ ಕುರಿತು ಮಾಹಿತಿ ನೀಡಿದರು.

ನಿರೂಪಣಾಧಿಕಾರಿ ಪ್ರಸನ್ನ ಕುಮಾರ್ ಮಾತನಾಡಿ, ಮಕ್ಕಳು, ಗರ್ಭಿಣಿಯರು ಹಾಗೂ ಬಾಣಂತಿಯರಲ್ಲಿ ಅಪೌಷ್ಟಿಕತೆ ಮತ್ತು ರಕ್ತಹೀನತೆ ತಡೆಗಟ್ಟುವುದರ ಜೊತೆಗೆ ಶಿಶು ಮರಣ ಪ್ರಮಾಣವನ್ನು ಕಡಿಮೆ ಮಾಡುವ ಉದ್ದೇಶದಿಂದ ಪೋಷಣ್ ಅಭಿಯಾನವನ್ನು ಹಮ್ಮಿಕೊಳ್ಳಲಾಗುತ್ತಿದೆ ಎಂದರು.

ಶಿಶುಅಭಿವೃದ್ಧಿ ಯೋಜನಾಧಿಕಾರಿ ಮಹೇಶ್ ಡಿ.ಎಚ್.ಮಾತನಾಡಿ, ಪೋಷಣ್ ಮಾಸಾಚರಣೆಯನ್ನು 2018ರಿಂದ ಆಚರಿಸಲಾಗುತ್ತಿದ್ದು, ಆರೋಗ್ಯಕರ ಆಹಾರ ಸೇವನೆಯಿಂದ ಆರೋಗ್ಯ ವೃದ್ಧಿಯಾಗುತ್ತದೆ ಎಂದು ತಿಳಿಸಿದರು.
ಕೋ-ಆಪರೇಟಿವ್ ಮಹಿಳಾ ಸಮಾಜದ ಅಧ್ಯಕ್ಷೆ ಬಿದ್ದಾಟಂಡ ಮೇರಿ ಚಿಟ್ಯಪ್ಪ, ತಾಲೂಕು ಗ್ಯಾರಂಟಿ ಸಮಿತಿ ಸದಸ್ಯ ಪಿ. ಎಂ.ಆರಫಾತ್, ಆರೋಗ್ಯ ಇಲಾಖೆಯ ವೇದಾವತಿ ಹಾಗೂ ಬಾಲ ವಿಕಾಸ ಸಮಿತಿ ಅಧ್ಯಕ್ಷೆ ಸೋನಿ ಮಾತನಾಡಿದರು.
ಕಾರ್ಯಕ್ರಮದಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರಿಗೆ ಪೋಷಣ್ ಅಭಿನಂದನಾ ಪತ್ರಗಳನ್ನು ಗಣ್ಯರು ವಿತರಿಸಿದರು. ಅಂಗನವಾಡಿ ವ್ಯಾಪ್ತಿಯ ಗರ್ಭಿಣಿಯರಿಗೆ ಸೀಮಂತ ಕಾರ್ಯಕ್ರಮವನ್ನು ಕೂಡ ನಡೆಸಲಾಯಿತು.
ಕಾರ್ಯಕ್ರಮದಲ್ಲಿ ಅಂಗನವಾಡಿ ಕಾರ್ಯಕರ್ತೆಯರು, ಗರ್ಭಿಣಿಯರು, ಬಾಣಂತಿಯರು, ಕಿಶೋರಿಯರು, ಸಂಘದ ಸದಸ್ಯರು, ತಾಯಂದಿರು, ಭಗವತಿ ಮಹಿಳಾ ಸಮಾಜದ ಆಡಳಿತ ಮಂಡಳಿ ಸದಸ್ಯರು ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.
ಶಿಶು ಅಭಿವೃದ್ಧಿ ಯೋಜನಾಧಿಕಾರಿ ಶೀತಾಲಕ್ಷ್ಮಿ ಸ್ವಾಗತಿಸಿದರು. ಅಂಗನವಾಡಿ ಕೇಂದ್ರದ ಮೇಲ್ವಿಚಾರಕಿ ಶೀಲಾ ಅಶೋಕ್ ವಂದಿಸಿದರು.