ನಾಪೋಕ್ಲು: ಪಶು ವೈದ್ಯಕೀಯ ಆಸ್ಪತ್ರೆಯ ನೂತನ ಕಟ್ಟಡ ನಿರ್ಮಾಣಕ್ಕೆ ಶಂಕು ಸ್ಥಾಪನೆ

ನಾಪೋಕ್ಲು:  ಪಶು ವೈದ್ಯಕೀಯ ಆಸ್ಪತ್ರೆಯ ನೂತನ ಕಟ್ಟಡ ನಿರ್ಮಾಣಕ್ಕೆ ಶಂಕು ಸ್ಥಾಪನೆ

ವರದಿ:ಝಕರಿಯ ನಾಪೋಕ್ಲು

ನಾಪೋಕ್ಲು :ನಾಪೋಕ್ಲುವಿನಲ್ಲಿ ಪಶು ವೈದ್ಯಕೀಯ ಆಸ್ಪತ್ರೆಯ ನೂತನ ಕಟ್ಟಡ ನಿರ್ಮಾಣಕ್ಕೆ ಶಂಕುಸ್ಥಾಪನೆಯನ್ನು ನೆರವೇರಿಸಲಾಯಿತು.ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕರಾದ ಎ.ಎಸ್ ಪೊನ್ನಣ್ಣ ಶಾಸಕರ 15 ಲಕ್ಷ ರೂ ಅನುದಾನದಲ್ಲಿ ನಿರ್ಮಿಸಲು ಉದ್ದೇಶಿಸಿರುವ ನೂತನ ಪಶು ವೈದ್ಯಕೀಯ ಕಟ್ಟಡ ನಿರ್ಮಾಣಕ್ಕೆ ನಾಪೋಕ್ಲು ಗ್ರಾಮ ಪಂಚಾಯಿತಿ ಅಧ್ಯಕ್ಷೆ ವನಜಾಕ್ಷಿ ರೇಣುಕೇಶ್ ಹಾಗೂ ಸದಸ್ಯರು ಭೂಮಿ ಪೂಜೆ ನೆರವೇರಿಸುವ ಮೂಲಕ ಚಾಲನೆ ನೀಡಿದರು.

 ಈ ಸಂದರ್ಭ ಪಂಚಾಯಿತಿ ಉಪಾಧ್ಯಕ್ಷೆ ಕಂಗಾಂಡ ಶಶಿ ಮಂದಣ್ಣ, ಗ್ರಾಮ ಪಂಚಾಯಿತಿ ಸದಸ್ಯರಾದ ಮಾಚೇಟ್ಟಿರ ಕುಶು ಕುಶಾಲಪ್ಪ, ಕುಲ್ಲೇಟಿರ ಅರುಣ್ ಬೇಬ, ಕೆ.ವೈ.ಅಶ್ರಫ್, ಇಸ್ಮಾಯಿಲ್, ಕುಲ್ಲೇಟಿರ ಹೇಮಾವತಿ, ಪಶುಪಾಲನ ಇಲಾಖೆಯ ಉಪನಿರ್ದೇಶಕ ಡಾ. ಲಿಂಗರಾಜ್ ದೊಡ್ಡಮನಿ, ಸಹಾಯಕ ನಿರ್ದೇಶಕ ಕೆ.ಎ. ಪ್ರಸನ್ನ, ಪಶುವೈದ್ಯಾಧಿಕಾರಿ ಡಾ. ಶಿಲ್ಪ ಶ್ರೀ, ಹಾಗೂ ಸಿಬ್ಬಂದಿಗಳು ಹಾಜರಿದ್ದರು. ಪೂಜಾ ವಿಧಿ ವಿಧಾನಗಳನ್ನು ಅರ್ಚಕರಾದ ಮಕ್ಕಿದಿವಾಕರ್ ನೆರವೇರಿಸಿದರು.