ನಾಪೋಕ್ಲು:ಚೆರಿಯಪರಂಬು ಮಳೆ ಹಾನಿ ಪ್ರದೇಶಕ್ಕೆ ಉಸ್ತುವಾರಿ ಸಚಿವರಾದ ಎನ್.ಎಸ್ ಭೋಸರಾಜು ಹಾಗೂ ಎ‌ಎಸ್ ಪೊನ್ನಣ್ಣ ಭೇಟಿ

ನಾಪೋಕ್ಲು:ಚೆರಿಯಪರಂಬು ಮಳೆ ಹಾನಿ ಪ್ರದೇಶಕ್ಕೆ ಉಸ್ತುವಾರಿ ಸಚಿವರಾದ ಎನ್.ಎಸ್ ಭೋಸರಾಜು ಹಾಗೂ ಎ‌ಎಸ್ ಪೊನ್ನಣ್ಣ ಭೇಟಿ

ನಾಪೋಕ್ಲು : ಚೆರಿಯಪರಂಬು ಭಾಗದಲ್ಲಿ ಮಳೆಯಿಂದಾಗಿ ಸಮಸ್ಯೆಗೀಡಾಟ ಪ್ರದೇಶಕ್ಕೆ ಇಂದು, ಜಿಲ್ಲಾ ಉಸ್ತುವಾರಿ ಸಚಿವರಾದ ಶ್ರೀ ಎನ್.ಎಸ್ ಭೋಸರಾಜು ಹಾಗೂ ಮಾನ್ಯ ಶಾಸಕರು ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಅಜ್ಜಿಕುಟ್ಟಿರ ಎಸ್ ಪೊನ್ನಣ್ಣ ರವರು ಭೇಟಿ ನೀಡಿ, ಸ್ಥಳ ಪರಿಶೀಲನೆ ನಡೆಸಿದರು. ಪ್ರತಿ ವರ್ಷ ಮಳೆಗಾಲದಲ್ಲಿ ಉಕ್ಕಿ ಹರಿಯುವ ಕಾವೇರಿ ನದಿಗೆ ಅಡ್ಡಲಾಗಿ ಕಟ್ಟಿರುವ ಸೇತುವೆಯ ಹಾಗೂ ಸುತ್ತಮುತ್ತಲಿನ ಪರಿಸರದ ವೀಕ್ಷಣೆಯನ್ನು ಮಾಡಿದ ಶಾಸಕರು, ಅಧಿಕಾರಿಗಳೊಂದಿಗೆ ಸುರಕ್ಷತೆ ಕ್ರಮದ ಬಗ್ಗೆ ಚರ್ಚಿಸಿ ಸಲಹೆ ನೀಡಿದರು. ಮುಂದಿನ ದಿನಗಳಲ್ಲಿ ಪ್ರವಾಹ ದಿಂದ ಸಂಪರ್ಕ ಕಡಿತ ಗೊಳ್ಳುವ ಈ ಸೇತುವೆಯ ಆಸುಪಾಸಿನಲ್ಲಿ ಮುಂಜಾಗ್ರತೆ ಕ್ರಮ ಕೈಗೊಳ್ಳುವ ನಿಟ್ಟಿನಲ್ಲಿ ಚರ್ಚಿಸಿದರು.  

ಈ ಸಂದರ್ಭದಲ್ಲಿ ಜಿಲ್ಲಾ ಅಧಿಕಾರಿ ವೆಂಕಟ್ ರಾಜ್,ಜಿ ಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು,ಉಪ ವಿಭಾಗದ ಅಧಿಕಾರಿಗಳು, ಜಿಲ್ಲಾ ಗ್ಯಾರೆಂಟಿ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷರಾದ ಶ್ರೀ ಧರ್ಮಜ ಉತ್ತಪ್ಪ, ನಾಪೋಕ್ಲು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಇಸ್ಮಾಯಿಲ್, ನಾಪೋಕ್ಲು ವಲಯ ಕಾಂಗ್ರೆಸ್ ಅಧ್ಯಕ್ಷರಾದ ಕುಶು ಕುಶಾಲಪ್ಪ, ಗ್ರಾಮ ಪಂಚಾಯತ್ ಅಧ್ಯಕ್ಷರು, ಸದಸ್ಯರುಗಳು, ಸರಕಾರಿ ನಾಮನಿರ್ದೇಶಿತ ಅಧ್ಯಕ್ಷರುಗಳು, ಸದಸ್ಯರುಗಳು,ಯುವ ಕಾಂಗ್ರೆಸ್ ಉಪಾಧ್ಯಕ್ಷರಾದ ಮೈಸಿ ಕತ್ತಣೀರ ಹಾಗೂ ಪ್ರಮುಖ ಉಪಸ್ಥಿತರಿದ್ದರು.