ವಿರಾಜಪೇಟೆ ಶಿವಕೇರಿ ಶ್ರೀ ವಿಷ್ಣು ದುರ್ಗಿ ವಿಷ್ಣುಮೂರ್ತಿ ನಾಗ ದೇವಾಲಯದಲ್ಲಿ ನವರಾತ್ರಿ ಉತ್ಸವ ಆರಂಭ
admincoorgdaily

ವಿರಾಜಪೇಟೆ:ವಿರಾಜಪೇಟೆ ನಗರದ ಶಿವೇರಿಯಲ್ಲಿರುವ ಶ್ರೀ ದುರ್ಗಿ ವಿಷ್ಣುಮೂರ್ತಿ ನಾಗ ದೇವಸ್ಥಾನದಲ್ಲಿ ವೈಭವದ ನವರಾತ್ರಿ ಪೂಜಾ ಮಹೋತ್ಸವಕ್ಕೆ ಶ್ರದ್ಧಾಭಕ್ತಿಗಳಿಂದ ಚಾಲನೆ ದೊರೆಯಿತು.
ದೇವಸ್ಥಾನದಲ್ಲಿ ಒಂಬತ್ತು ದಿನಗಳ ಕಾಲ ವಿವಿಧ ಧಾರ್ಮಿಕ ವಿಧಿವಿಧಾನಗಳೊಂದಿಗೆ ನವರಾತ್ರಿ ಉತ್ಸವ ಹಾಗೂ ವಿಶೇಷ ಪೂಜಾ ಕಾರ್ಯಕ್ರಮಗಳು ಜರುಗಲಿವೆ. ಪ್ರಥಮ ದಿನದ ಅಂಗವಾಗಿ ಶ್ರೀ ದೇವಿಗೆ ವಿಶೇಷ ಅಲಂಕಾರ ಸೇವೆ ಹಾಗೂ ಧಾರ್ಮಿಕ ಪೂಜೆಗಳು ನಡೆದು, ಉತ್ಸವಕ್ಕೆ ಚಾಲನೆ ನೀಡಲಾಯಿತು.
ಈ ಸಂದರ್ಭದಲ್ಲಿ ಆಗಮಿಸಿದ್ದ ನೂರಾರು ಭಕ್ತಾದಿಗಳಿಗೆ ಪ್ರಸಾದ ವಿತರಣೆ ಹಾಗೂ ಅನ್ನಸಂತರ್ಪಣೆ ನೆರವೇರಿತು. ಪೂಜಾ ಕಾರ್ಯಕ್ರಮದ ಭಾಗವಾಗಿ ದೇವಸ್ಥಾನಕ್ಕೆ ಭೇಟಿ ನೀಡಿದ್ದ ಮುತ್ತೈದೆಯರಿಗೆ ಅರಿಶಿನ-ಕುಂಕುಮ, ತಾಂಬೂಲದೊಂದಿಗೆ ನೀಡಿ ಗೌರವಿಸಿ, ಶುಭ ಹಾರೈಸಲಾಯಿತು.
ಧಾರ್ಮಿಕ ಸಮಾರಂಭದಲ್ಲಿ ವಿರಾಜಪೇಟೆ ಹಾಗೂ ಸುತ್ತಮುತ್ತಲ ಪ್ರದೇಶದ ನೂರಾರು ಭಕ್ತಾದಿಗಳು ಭಾಗವಹಿಸಿ ದೇವಿಯ ಕೃಪೆಗೆ ಪಾತ್ರರಾದರು.