Kodagu

ಕುಂದ ಗ್ರಾಮದಲ್ಲಿ ನೂತನ ರಸ್ತೆ ಲೋಕಾರ್ಪಣೆ - ಶಾಸಕ ಎ.ಎಸ್.ಪೊನ್ನಣ್ಣ ಚಾಲನೆ

admincoorgdaily

ಕುಂದ ಗ್ರಾಮದಲ್ಲಿ ನೂತನ ರಸ್ತೆ ಲೋಕಾರ್ಪಣೆ - ಶಾಸಕ ಎ.ಎಸ್.ಪೊನ್ನಣ್ಣ ಚಾಲನೆ
ಪೊನ್ನಂಪೇಟೆ:ಪೊನ್ನಂಪೇಟೆ ತಾಲೂಕಿನ ಕುಂದ ಗ್ರಾಮಕ್ಕೆ ಕ್ಷೇತ್ರದ ಶಾಸಕರು ಹಾಗೂ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಎ.ಎಸ್.ಪೊನ್ನಣ್ಣ ಅವರು ಇಂದು ಅಭಿವೃದ್ಧಿ ಕಾರ್ಯಕ್ರಮದ ಉದ್ಘಾಟನೆ ನಿಮಿತ್ತ ಭೇಟಿ ನೀಡಿದರು.

ಕುಂದ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಲಾದ ರಸ್ತೆಯ ಲೋಕಾರ್ಪಣಾ ಕಾರ್ಯಕ್ರಮವನ್ನು ಶಾಸಕರು ನೆರವೇರಿಸಿ ಶುಭ ಕೋರಿದರು.

ಈ ಸಂದರ್ಭದಲ್ಲಿ ಮಾತನಾಡಿದ ಅವರು, ಕಾವೇರಿ ಕೊಡವ ಕೂಟದವರು ಹಲವಾರು ಉತ್ತಮ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಸಮಾಜಮುಖಿ ಕಾರ್ಯಗಳಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದಾರೆ. ಈ ಭಾಗದ ರಸ್ತೆಯನ್ನು ಅಭಿವೃದ್ಧಿಪಡಿಸಿಕೊಡಬೇಕೆಂದು ಅವರ ಮನವಿಯನ್ನು ಪರಿಗಣಿಸಿ ಇಂದು ರಸ್ತೆಯನ್ನು ನಿರ್ಮಿಸಿಕೊಡಲಾಗಿದೆ. ಇದರ ಸದುಪಯೋಗ ಮಾಡಿಕೊಂಡು ಮತ್ತಷ್ಟು ಉತ್ತಮ ಕಾರ್ಯಗಳು ನಿಮ್ಮ ಕೂಟದ ವತಿಯಿಂದ ನಾಡಿಗೆ ದೊರಕಲಿ ಎಂದು ಆಶಿಸಿದರು.

ಇದೇ ಸಂದರ್ಭದಲ್ಲಿ ಕಾವೇರಿ ಕೊಡವ ಕೂಟದವರು ನೀಡಿದ ಸನ್ಮಾನವನ್ನು ಶಾಸಕರು ಸ್ವೀಕರಿಸಿದರು.

ಕಾರ್ಯಕ್ರಮದಲ್ಲಿ ಜಿಲ್ಲಾ ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ತಿತಿಮಾಡ ಧರ್ಮಜ ಉತ್ತಪ್ಪ, ಬ್ಲಾಕ್ ಅಧ್ಯಕ್ಷ ಮಿದೇರಿರ ನವೀನ್, ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಕಾಳಿಮಾಡ ಪ್ರಶಾಂತ್, ಕಾವೇರಿ ಕೊಡವ ಕೂಟದ ಅಧ್ಯಕ್ಷರು, ಸದಸ್ಯರು, ಪದಾಧಿಕಾರಿಗಳು ಹಾಗೂ ಪ್ರಮುಖರು ಉಪಸ್ಥಿತರಿದ್ದರು.