ಕಾವೇರಿ ಪದವಿಪೂರ್ವ ಕಾಲೇಜಿನಲ್ಲಿ NSS ದಿನಾಚರಣೆ
admincoorgdaily

ವಿರಾಜಪೇಟೆ:ರಾಷ್ಟ್ರೀಯ ಸೇವಾ ಯೋಜನಾ ಘಟಕದ ಪ್ರಯುಕ್ತ ವಿರಾಜಪೇಟೆಯ ಕಾವೇರಿ ಪದವಿಪೂರ್ವ ಕಾಲೇಜಿನಲ್ಲಿ ದಿನಾಂಕ 24-09-2026 ರಂದು ರಾಷ್ಟ್ರೀಯ ಸೇವಾ ಯೋಜನಾ ದಿನಾಚರಣೆಯನ್ನು ಆಚರಿಸಲಾಯಿತು.
ಕಾರ್ಯಕ್ರಮದಲ್ಲಿ ಕಾವೇರಿ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಶ್ರೀಮತಿ ಎಂ.ಕೆ. ಪದ್ಮ ಮಾತನಾಡಿ, ಸ್ವಯಂಸೇವಕರು ತಮ್ಮ ವಿದ್ಯಾರ್ಥಿ ಜೀವನದಲ್ಲಿ ಶಿಸ್ತು, ಸೇವಾ ಮನೋಭಾವನೆ, ಮಾನವೀಯ ಮೌಲ್ಯಗಳು ಹಾಗೂ ನಿಸ್ವಾರ್ಥ ಸೇವೆಯನ್ನು ಬೆಳೆಸಿಕೊಳ್ಳಬೇಕು ಎಂದು ಕರೆ ನೀಡಿದರು.
ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ನಿಕಟಪೂರ್ವ ಎನ್.ಎಸ್.ಎಸ್ ಅಧಿಕಾರಿ ಶ್ರೀಮತಿ ಕೆ.ಪಿ. ಗಾಯತ್ರಿ ತಿಮ್ಮಯ್ಯ ಮಾತನಾಡಿ, ದಿನದ ಮಹತ್ವವನ್ನು ವಿವರಿಸಿ, ಸ್ವಯಂಸೇವಕರು ನಿಸ್ವಾರ್ಥ ಸೇವೆಯಿಂದ ಸೇವಾ ಮನೋಭಾವನೆಯನ್ನು ಬೆಳೆಸಿಕೊಂಡು ಸಮಾಜಮುಖಿ ಕಾರ್ಯಗಳಲ್ಲಿ ತೊಡಗಿಸಿಕೊಳ್ಳಬೇಕು. ರಾಷ್ಟ್ರೀಯ ಸೇವಾ ಯೋಜನೆ ವ್ಯಕ್ತಿತ್ವ ನಿರ್ಮಾಣಕ್ಕೆ ಉತ್ತಮ ವೇದಿಕೆ ಕಲ್ಪಿಸುತ್ತದೆ ಎಂದು ಹಿತವಚನ ನುಡಿದರು.
ಕಾರ್ಯಕ್ರಮದಲ್ಲಿ ಸ್ವಯಂಸೇವಕರು ರಾಷ್ಟ್ರೀಯ ಸೇವಾ ಯೋಜನಾ ಘಟಕದ ಸ್ವಯಂಸೇವಾ ಪ್ರಾರ್ಥನಾ ಗೀತೆಯನ್ನು ಹಾಡಿದರು ಹಾಗೂ ಗುರಿ ಉದ್ದೇಶಗಳನ್ನು ತಿಳಿಸಿಕೊಟ್ಟರು.
ನಂತರ ಸ್ವಯಂಸೇವಕರು ಕಾಲೇಜು ಆವರಣವನ್ನು ಸ್ವಚ್ಛಗೊಳಿಸಿ ಸಿಹಿ ವಿತರಿಸಿದರು.
ಕಾರ್ಯಕ್ರಮದಲ್ಲಿ ಹಿರಿಯ ಉಪನ್ಯಾಸಕರಾದ ಶ್ರೀಮತಿ ಎಂ.ಪಿ. ದಮಯಂತಿ, ಶ್ರೀಮತಿ ಎ.ಎಂ. ಡೈನ ಸೋಮಯ್ಯ, ವಿದ್ಯಾರ್ಥಿ ಕ್ಷೇಮಾಭಿವೃದ್ಧಿ ಸಂಘದ ಸಂಚಾಲಕರಾದ ಕು. ನಕಿಯಭಾನು, ಸರ್ವ ಉಪನ್ಯಾಸಕ ವೃಂದ, ರಾಷ್ಟ್ರೀಯ ಸೇವಾ ಯೋಜನೆ ಘಟಕದ ಕಾರ್ಯಕ್ರಮಾಧಿಕಾರಿ ಶ್ರೀಮತಿ ಅನುಪಮ ತಿಮ್ಮಯ್ಯ, ಸ್ವಯಂಸೇವಕರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.