ಹೆಬ್ಬಾಲೆ ಗ್ರಾ.ಪಂನಲ್ಲಿ ಪೋಷಣ ಅಭಿಯಾನ - ಗರ್ಭಿಣಿ, ಮಕ್ಕಳ ಆರೈಕೆ ಬಗ್ಗೆ ಜಾಗೃತಿ
admincoorgdaily

ಹೆಬ್ಬಾಲೆ:ಗ್ರಾಮ ಪಂಚಾಯಿತಿ ಹೆಬ್ಬಾಲೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರ ಹೆಬ್ಬಾಲೆ ಇವರ ಸಂಯುಕ್ತಾಶ್ರಯದಲ್ಲಿ ಗ್ರಾಮ ಪಂಚಾಯಿತಿ ಸಭಾಂಗಣದಲ್ಲಿ ಮಂಗಳವಾರ ಪೋಷಣ ಅಭಿಯಾನ ಹಾಗೂ ಸೀಮಂತ ಕಾರ್ಯಕ್ರಮ ನಡೆಯಿತು.
ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ರವಿ ಕುಮಾರ್ ಅವರು ಪೌಷ್ಟಿಕ ಆಹಾರದ ಬಗ್ಗೆ ಮಾಹಿತಿ ನೀಡಿದರು. ಆರೋಗ್ಯ ಕೇಂದ್ರದ ಮೇಲ್ವಿಚಾರಕಿ ಲತಾ ಕುಮಾರಿ ಅವರು ಗರ್ಭಿಣಿ, ಬಾಣಂತಿ ಹಾಗೂ ಮಗುವಿನ ಆರೈಕೆ ಬಗ್ಗೆ ತಿಳಿಸಿದರು.
RKSK ಆಪ್ತ ಸಮಾಲೋಚಕಿ ಶೈಲಜಾ ಅವರು ಹದಿಹರೆಯದ ಆರೋಗ್ಯ ಹಾಗೂ ಮಾದಕ ವಸ್ತುಗಳ ಬಳಕೆಯಿಂದ ಆಗುವ ದುಷ್ಪರಿಣಾಮಗಳ ಬಗ್ಗೆ ಮಾಹಿತಿ ನೀಡಿದರು. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಮಮತಾ ಅವರು ಗೃಹಲಕ್ಷ್ಮಿ ಹಾಗೂ ಮಾತೃ ವಂದನಾ ಯೋಜನೆಗಳ ಬಗ್ಗೆ ವಿವರಿಸಿದರು.
ಆರೋಗ್ಯ ನಿರೀಕ್ಷಕ ಸಂಜಯ್ ಅವರು ಶಿಶು ಮರಣ ಪ್ರಮಾಣ ಕಡಿಮೆ ಮಾಡಲು ಪ್ರತಿ ಅಂಗನವಾಡಿ ಕೇಂದ್ರದಲ್ಲಿ ತಾಯಿ ಮತ್ತು ಮಗುವಿನ ಆರೋಗ್ಯದ ಬಗ್ಗೆ ಕಾರ್ಯಕ್ರಮ ನಡೆಸುವಂತೆ ತಿಳಿಸಿದರು.
ಕಾರ್ಯಕ್ರಮದಲ್ಲಿ 4 ಗರ್ಭಿಣಿ ಮಹಿಳೆಯರಿಗೆ ಸೀಮಂತ ಕಾರ್ಯಕ್ರಮ ನೆರವೇರಿಸಲಾಯಿತು. ಅಂಗನವಾಡಿ ಕಾರ್ಯಕರ್ತೆಯರಾದ ವನಜಾಕ್ಷಿ ಮತ್ತು ಸುಧಾ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.
ಹಿರಿಯ ಗ್ರಾಮ ಮುಖಂಡೆ *ಸರಸ್ವತಿ* ಅವರು ಅಧ್ಯಕ್ಷತೆ ವಹಿಸಿದ್ದರು. ಮಾಜಿ ಗ್ರಾ.ಪಂ ಸದಸ್ಯ ಚಂದ್ರಶೇಖರ, ಹೆಬ್ಬಾಲೆ ಮತ್ತು ಕೂಡಿಗೆ ಗ್ರಾ.ಪಂ ವ್ಯಾಪ್ತಿಯ ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರು, ಆಶಾ ಕಾರ್ಯಕರ್ತೆಯರು ಹಾಗೂ ಸಾರ್ವಜನಿಕರು ಭಾಗವಹಿಸಿದ್ದರು.