ಸೆ.20ರಂದು ಸೋಮವಾರಪೇಟೆ ತಾಲೂಕು ಹಿಂದೂ ಮಲಯಾಳ ಸಮಾಜದ ದಶಮಾನೋತ್ಸವ ಹಾಗೂ ಓಣಂ ಉತ್ಸವ
admincoorgdaily

ಸೋಮವಾರಪೇಟೆ, ಸೆ. 19: ತಾಲೂಕು ಹಿಂದೂ ಮಲಯಾಳ ಸಮಾಜದ ದಶಮಾನೋತ್ಸವ ಮತ್ತು ಓಣಂ ಉತ್ಸವವು ಸೆ.20ರ ಭಾನುವಾರ ಪಟ್ಟಣದ ಜಾನಕಿ ಕನ್ವೆನ್ಷನ್ ಹಾಲ್‌ನಲ್ಲಿ ನಡೆಯಲಿದೆ ಎಂದು ಸಮಾಜದ ಅಧ್ಯಕ್ಷ ವಿ.ಎಂ. ವಿಜಯ್ ತಿಳಿಸಿದ್ದಾರೆ.
ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, ಬೆಳಿಗ್ಗೆ 7ರಿಂದ 8.30ರವರೆಗೆ ಪೂಕಳಂ ಸ್ಪರ್ಧೆ, 8.30ಕ್ಕೆ ಪ್ರತಿಮೆಗಳಿಗೆ ಮಾಲಾರ್ಪಣೆ, 9.30ಕ್ಕೆ ಕಕ್ಕೆಹೊಳೆ ಜಂಕ್ಷನ್‌ನ ಶ್ರೀ ಮುತ್ತಪ್ಪ ಮತ್ತು ಅಯ್ಯಪ್ಪ ದೇವಾಲಯದಿಂದ ಸಿಂಗಾರಿ ಮೇಳದೊಂದಿಗೆ ಓಣಂ ಘೋಷಯಾತ್ರೆ ನಡೆಯಲಿದೆ ಎಂದರು.
ಬೆಳಿಗ್ಗೆ 11ಕ್ಕೆ ನಡೆಯುವ ಸಭಾ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಎ.ಎಸ್. ಪೊನ್ನಣ್ಣ, ಶಾಸಕ ಡಾ. ಮಂತರ್ ಗೌಡ, ಸಂಸದ ಯದುವೀರ್ ಒಡೆಯರ್, ಮಾಜಿ ಶಾಸಕರಾದ ಬಿ.ಎ. ಜೀವಿಜಯ, ಕೆ.ಜಿ. ಬೋಪಯ್ಯ, ಅಪ್ಪಚ್ಚು ರಂಜನ್, ಉದ್ಯಮಿ ಹರಪಳ್ಳಿ ರವೀಂದ್ರ ಸೇರಿದಂತೆ ಗಣ್ಯರು ಭಾಗವಹಿಸಲಿದ್ದಾರೆ. ಕೇರಳ ಶಂಕರಾನಂದ ಮಠದ ಶಿವ ಸ್ವರೂಪಾನಂದ ಸ್ವಾಮೀಜಿ ಮತ್ತು ಕಾಞಂಗಾಡ್ ಗೃಹಸ್ಥಾಶ್ರಮದ ಗಂಗಾಜಿ ನಾಯರ್ ದಿವ್ಯ ಸಾನ್ನಿಧ್ಯ ವಹಿಸಲಿದ್ದಾರೆ.
2025-26ನೇ ಸಾಲಿನ ಎಸ್‌ಎಸ್‌ಎಲ್‌ಸಿ ಮತ್ತು ದ್ವಿತೀಯ ಪಿಯುಸಿಯಲ್ಲಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಹಾಗೂ ಬಡ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ ಮತ್ತು ಸಾಧಕರಿಗೆ ಸನ್ಮಾನ ನಡೆಯಲಿದೆ. ಮಧ್ಯಾಹ್ನ 3ಕ್ಕೆ ಸಾಂಸ್ಕೃತಿಕ ಕಾರ್ಯಕ್ರಮಗಳು, ಸಂಜೆ 5ಕ್ಕೆ ಸಮಾರೋಪ ಮತ್ತು ಬಹುಮಾನ ವಿತರಣೆ ನಡೆಯಲಿದೆ.
ಗೋಷ್ಠಿಯಲ್ಲಿ ಉಪಾಧ್ಯಕ್ಷ ಅಜೀಶ್ ಕುಮಾರ್, ಪ್ರಧಾನ ಕಾರ್ಯದರ್ಶಿ ಮೋಹನ್, ಖಜಾಂಚಿ ಎನ್.ಎನ್. ದಯಾನಂದ, ಮಹಿಳಾ ಘಟಕದ ಅಧ್ಯಕ್ಷೆ ಶೀಲಾ ಶಶಿ, ಸಾಂಸ್ಕೃತಿಕ ಸಮಿತಿ ಪ್ರಮುಖೆ ಸುಜಾತ ಬಾಲಕೃಷ್ಣ ಉಪಸ್ಥಿತರಿದ್ದರು.