ಮಡಿಕೇರಿಯಲ್ಲಿ ಯುವಕನ ಅಂಗಾಂಗ ದಾನ ಪ್ರಕ್ರಿಯೆ ಆರಂಭ
admincoorgdaily

ಮಡಿಕೇರಿ:
ಚಾಮುಂಡೇಶ್ವರಿ ನಗರದ ಯೋಗೇಶ್ (22) ಅವರ ಅಂಗಾಂಗ ದಾನ ಪ್ರಕ್ರಿಯೆ ಮಡಿಕೇರಿಯ ವೈದ್ಯಕೀಯ ವಿಜ್ಞಾನ ಬೋಧಕ ಆಸ್ಪತ್ರೆಯಲ್ಲಿ ಆರಂಭವಾಗಿದೆ.
ಮೆದುಳು ನಿಷ್ಕ್ರಿಯಗೊಂಡ ಯುವಕನ ಅಂಗಾಂಗಗಳನ್ನು ದಾನ ಮಾಡಲು ಕುಟುಂಬಸ್ಥರು ಒಪ್ಪಿಗೆ ನೀಡಿದ್ದು, ಬುಧವಾರ ಆಸ್ಪತ್ರೆಯ ಶಸ್ತ್ರಚಿಕಿತ್ಸಾ ಘಟಕದಲ್ಲಿ ಪ್ರಕ್ರಿಯೆ ನಡೆಯುತ್ತಿದೆ.
ಮೈಸೂರಿನ ಮಣಿಪಾಲ್ ಆಸ್ಪತ್ರೆಯ ತಜ್ಞ ವೈದ್ಯರ ತಂಡ ಹಾಗೂ ಮಡಿಕೇರಿ ವೈದ್ಯಕೀಯ ವಿಜ್ಞಾನ ಸಂಸ್ಥೆಯ ಡೀನ್ ಡಾ. ಲೋಕೇಶ್, ಡಿ.ಎಸ್.ಎಂ. ಡಾ. ನಂಜುಂಡ, ಡಾ. ಸೋಮಶೇಖರ್, ಡಾ. ನಿಶಿದ್ ಜೋಸೆಫ್, ಡಾ. ವಿನೋದ್ ಕುಮಾರಿ ಅವರ ನೇತೃತ್ವದಲ್ಲಿ ಅಂಗಾಂಗ ಕಸಿ ಪ್ರಕ್ರಿಯೆ ನಡೆಯುತ್ತಿದೆ.
ಮಗನನ್ನು ಕಳೆದುಕೊಂಡ ನೋವಿನ ನಡುವೆಯೂ ಹಲವರ ಜೀವ ಉಳಿಸಲು ಮುಂದಾದ ಕುಟುಂಬಸ್ಥರ ನಿರ್ಧಾರಕ್ಕೆ ಎಲ್ಲೆಡೆ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಆಸ್ಪತ್ರೆ ಆವರಣದಲ್ಲಿ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿತ್ತು.