ಕೇರಳ ಸಮಾಜದ ನೂತನ ಅಧ್ಯಕ್ಷರಾಗಿ ಪಿ.ರವೀಂದ್ರನ್ ಮರು ಆಯ್ಕೆ
admincoorgdaily

ಕುಶಾಲನಗರ:ಕೇರಳ ಸಮಾಜ (ರಿ) ಕುಶಾಲನಗರದ ನೂತನ ಸಾಲಿನ ಅಧ್ಯಕ್ಷರಾಗಿ ಹಾಲಿ ಅಧ್ಯಕ್ಷ ಪಿ.ರವೀಂದ್ರನ್ ಅವರು ಮತ್ತೊಮ್ಮೆ ಅವಿರೋಧವಾಗಿ ಆಯ್ಕೆಯಾದರು. ಅವರೊಂದಿಗೆ ಆಡಳಿತ ಮಂಡಳಿಯ ಎಲ್ಲಾ ಸದಸ್ಯರು ಕೂಡ ಅವಿರೋಧವಾಗಿ ಆಯ್ಕೆಯಾದರು.
ಕೇರಳ ಸಮಾಜದ ಕಟ್ಟಡದ ಸಭಾಂಗಣದಲ್ಲಿ ಅಧ್ಯಕ್ಷ ಪಿ.ರವೀಂದ್ರನ್ ಅವರ ಅಧ್ಯಕ್ಷತೆಯಲ್ಲಿ ವಾರ್ಷಿಕ ಮಹಾಸಭೆ ನಡೆಯಿತು.
ಸಭೆಯಲ್ಲಿ ಹಿಂದಿನ ಮಹಾಸಭೆಯ ನಡಾವಳಿಗಳನ್ನು ಓದಿ ಅನುಮೋದಿಸಲಾಯಿತು. ಕಳೆದ ವರ್ಷದ ವಾರ್ಷಿಕ ಚಟುವಟಿಕೆಗಳ ವರದಿ ಹಾಗೂ ಲೆಕ್ಕಪರಿಶೋಧನಾ ವರದಿಯನ್ನು ಮಂಡಿಸಿ ಅನುಮೋದಿಸಲಾಯಿತು.
ನಂತರ ಸಮಾಜದ ಪ್ರಸ್ತುತ ಚಟುವಟಿಕೆಗಳು ಹಾಗೂ ಮುಂದಿನ ಯೋಜನೆಗಳು, ವಾರ್ಷಿಕ ಸದಸ್ಯತ್ವ ಶುಲ್ಕ ಹಾಗೂ ಬಾಕಿ ಇರುವ ಶುಲ್ಕಗಳ ಕುರಿತು, ಮರಣ ನಿಧಿಯ ಪ್ರಸ್ತುತ ಠೇವಣಿ ಮತ್ತು ಮುಂದಿನ ಕ್ರಮಗಳ ಬಗ್ಗೆ ಚರ್ಚಿಸಲಾಯಿತು.
ನಂತರ ಪ್ರಸ್ತುತ ಕಾರ್ಯಕಾರಿ ಸಮಿತಿಯನ್ನು ವಿಸರ್ಜಿಸಲಾಯಿತು. ಬಳಿಕ ನಡೆದ ಸಭೆಯಲ್ಲಿ ಸರ್ವಾನುಮತದಿಂದ ಮತ್ತೊಮ್ಮೆ ಅಧ್ಯಕ್ಷರಾಗಿ ಪಿ.ರವೀಂದ್ರನ್ ಹಾಗೂ ನೂತನ ಆಡಳಿತ ಮಂಡಳಿಯ ಸದಸ್ಯರನ್ನು ಆಯ್ಕೆ ಮಾಡಲಾಯಿತು.
ವರದಿ: ಟಿ.ಆರ್.ಪ್ರಭುದೇವ್, ಕುಶಾಲನಗರ