ಗೌರಿ-ಗಣೇಶ ಹಬ್ಬಕ್ಕೆ ಒಂದೇ ಸೂರಿನಡಿ ಅನುಮತಿ - ಎಸ್ಪಿ ಬಿಂದುಮಣಿ
admincoorgdaily

ಕುಶಾಲನಗರ, ಸೆ.9: ಗೌರಿ-ಗಣೇಶ ಹಬ್ಬ ಆಚರಣೆಗೆ ಸಂಬಂಧಿಸಿದ ಎಲ್ಲಾ ಅನುಮತಿಗಳನ್ನು ಒಂದೇ ಸೂರಿನಡಿ ಪಡೆಯಲು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿಂದುಮಣಿ ಅವರು ಅನುವು ಮಾಡಿಕೊಟ್ಟಿದ್ದಾರೆ.
ಕುಶಾಲನಗರ ಪೊಲೀಸ್ ಠಾಣೆಯ ವಿಶ್ರಾಂತಿ ಕೊಠಡಿಯಲ್ಲಿ ಗೌರಿ-ಗಣೇಶ ಪ್ರತಿಷ್ಠಾಪನೆ ಮತ್ತು ವಿಸರ್ಜನೆ ಕಾರ್ಯಕ್ರಮಗಳಿಗೆ ಅನುಮತಿ ಪಡೆಯಲು ಒಂದೇ ಜಾಗದಲ್ಲಿ ಎಲ್ಲಾ ಇಲಾಖೆಗಳ ಅನುಮತಿ ಪಡೆಯುವ ವ್ಯವಸ್ಥೆ ಮಾಡಲಾಗಿದೆ.
ಸಾರ್ವಜನಿಕ ಗಣೇಶೋತ್ಸವ ಆಚರಿಸುವವರು ಪೊಲೀಸ್, ಪುರಸಭೆ, ಬೆಸ್ಕಾಂ, ಅಗ್ನಿಶಾಮಕ ಸೇರಿದಂತೆ ವಿವಿಧ ಇಲಾಖೆಗಳ ಅನುಮತಿಗಾಗಿ ಅಲೆದಾಡುವುದನ್ನು ತಪ್ಪಿಸಲು ಏಕ ಗವಾಕ್ಷಿ ವ್ಯವಸ್ಥೆ ಕಲ್ಪಿಸಲಾಗಿದೆ. ಕುಶಾಲನಗರ ಠಾಣೆಯಲ್ಲೇ ಎಲ್ಲಾ ಇಲಾಖೆಗಳ ಅನುಮತಿ ಒಂದೇ ಜಾಗದಲ್ಲಿ ಸಿಗಲಿದೆ ಎಂದು ಅವರು ತಿಳಿಸಿದರು.
ಸಭೆಯಲ್ಲಿ ಸೋಮವಾರಪೇಟೆ ಡಿವೈಎಸ್ಪಿ, ಕುಶಾಲನಗರ ಸರ್ಕಲ್ ಇನ್ಸ್‌ಪೆಕ್ಟರ್, ವಿವಿಧ ಠಾಣೆಗಳ ಪಿಎಸ್‌ಐಗಳು ಹಾಗೂ ವಿವಿಧ ಗಣೇಶೋತ್ಸವ ಸಮಿತಿಗಳ ಪದಾಧಿಕಾರಿಗಳು ಉಪಸ್ಥಿತರಿದ್ದರು.