Kodagu

ಗೌರಿ-ಗಣೇಶ ಹಬ್ಬಕ್ಕೆ ಕಡ್ಡಾಯವಾಗಿ ಅನುಮತಿ ಪಡೆಯಲೇಬೇಕು - ಎಸ್ಪಿ ಬಿಂದುಮಣಿ ಸೂಚನೆ

admincoorgdaily

ಗೌರಿ-ಗಣೇಶ ಹಬ್ಬಕ್ಕೆ ಕಡ್ಡಾಯವಾಗಿ ಅನುಮತಿ ಪಡೆಯಲೇಬೇಕು - ಎಸ್ಪಿ ಬಿಂದುಮಣಿ ಸೂಚನೆ
ಕುಶಾಲನಗರ ಸೆ.9: ಗೌರಿ-ಗಣೇಶ ಹಬ್ಬದ ಹಿನ್ನೆಲೆಯಲ್ಲಿ ಸಾರ್ವಜನಿಕವಾಗಿ ಗಣೇಶ ಮೂರ್ತಿ ಪ್ರತಿಷ್ಠಾಪಿಸುವವರು ಹಾಗೂ ವಿಸರ್ಜನಾ ಸಮಿತಿಗಳು ಕಡ್ಡಾಯವಾಗಿ ಪೊಲೀಸ್ ಇಲಾಖೆಯಿಂದ ಅನುಮತಿ ಪಡೆಯಲೇಬೇಕು ಎಂದು ಕೊಡಗು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿಂದುಮಣಿ ಸೂಚಿಸಿದ್ದಾರೆ.

ಸೋಮವಾರಪೇಟೆ ಉಪವಿಭಾಗದ ವತಿಯಿಂದ ಹಮ್ಮಿಕೊಂಡಿದ್ದ ಗೌರಿ-ಗಣೇಶ ಹಬ್ಬದ ಪ್ರತಿಷ್ಠಾಪನೆ ಹಾಗೂ ವಿಸರ್ಜನಾ ಸಮಿತಿಗಳ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು.

ಸಾರ್ವಜನಿಕ ಸ್ಥಳದಲ್ಲಿ ಗಣೇಶ ಪ್ರತಿಷ್ಠಾಪನೆಗೆ ಸ್ಥಳೀಯ ಪೊಲೀಸ್ ಠಾಣೆ ಹಾಗೂ ತಾಲ್ಲೂಕು ಆಡಳಿತದಿಂದ ಅನುಮತಿ ಪಡೆಯಬೇಕು. ಡಿಜೆ, ಅತೀ ದೊಡ್ಡ ಧ್ವನಿವರ್ಧಕಗಳ ಬಳಕೆ ಸಂಪೂರ್ಣ ನಿಷೇಧ. ಸುಪ್ರೀಂ ಕೋರ್ಟ್ ನಿಯಮದಂತೆ ರಾತ್ರಿ 10 ಗಂಟೆ ನಂತರ ಧ್ವನಿವರ್ಧಕ ಬಳಕೆ ಮಾಡುವಂತಿಲ್ಲ. ಪರಿಸರ ಸ್ನೇಹಿ ಗಣೇಶ ಮೂರ್ತಿಗಳನ್ನೇ ಬಳಸಬೇಕು. ವಿದ್ಯುತ್ ಸಂಪರ್ಕದಲ್ಲಿ ಎಚ್ಚರ ವಹಿಸಬೇಕು. ವಿಸರ್ಜನಾ ಮೆರವಣಿಗೆ ವೇಳೆ ಕಾನೂನು ಸುವ್ಯವಸ್ಥೆಗೆ ಧಕ್ಕೆಯಾಗದಂತೆ ಎಲ್ಲಾ ಸಮಿತಿಗಳು ಸಹಕರಿಸಬೇಕು ಎಂದು ಕರೆ ನೀಡಿದರು.

ಅಹಿತಕರ ಘಟನೆಗಳು ನಡೆಯದಂತೆ ಮುನ್ನೆಚ್ಚರಿಕೆ ವಹಿಸಲು ಪೊಲೀಸ್ ಇಲಾಖೆ ಸಕಲ ಸಿದ್ಧತೆ ಮಾಡಿಕೊಂಡಿದೆ. ನಿಯಮ ಉಲ್ಲಂಘಿಸುವವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದರು.

ಸಭೆಯಲ್ಲಿ ಡಿವೈಎಸ್ಪಿ, ಸರ್ಕಲ್ ಇನ್ಸ್‌ಪೆಕ್ಟರ್‌ಗಳು, ವಿವಿಧ ಠಾಣೆಗಳ ಪಿಎಸ್ಐಗಳು ಹಾಗೂ ತಾಲ್ಲೂಕಿನ ವಿವಿಧ ಗಣೇಶೋತ್ಸವ ಸಮಿತಿಗಳ ಪದಾಧಿಕಾರಿಗಳು ಭಾಗವಹಿಸಿದ್ದರು.