ಶಿಕ್ಷಕರ ದಿನಾಚರಣೆಯ ಪ್ರಯುಕ್ತ ಗಿಡ ನೆಡುವ ಕಾರ್ಯಕ್ರಮ
admincoorgdaily

ಮಡಿಕೇರಿ:
ಅರಣ್ಯ ಇಲಾಖೆ, ಕೊಡಗು ಜಿಲ್ಲೆ ಹಾಗೂ ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ಕಾಲೇಜು, ಮಡಿಕೇರಿ ಇವರ ಸಹಯೋಗದಲ್ಲಿ ಶಿಕ್ಷಕರ ದಿನಾಚರಣೆಯ ಪ್ರಯುಕ್ತ ಗಿಡ ನೆಡುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.
ಕಾರ್ಯಕ್ರಮದಲ್ಲಿ ಕಾಲೇಜಿನ ಮಾನ್ಯ ಪ್ರಾಂಶುಪಾಲರಾದ ಮೇಜರ್ ಡಾ. ರಾಘವ ಬಿ., ಅರ್ಥಶಾಸ್ತ್ರ ವಿಭಾಗದ ಮುಖ್ಯಸ್ಥರಾದ ಪ್ರೊ. ತಿಪ್ಪೇಸ್ವಾಮಿ ಇ, ಎನ್‌ಎಸ್‌ಎಸ್ ಘಟಕದ ಯೋಜನಾಧಿಕಾರಿ ಡಾ. ಶೈಲಶ್ರೀ ಕೆ, ವಾಣಿಜ್ಯಶಾಸ್ತ್ರ ವಿಭಾಗದ ಸಹಾಯಕ ಪ್ರಾಧ್ಯಾಪಕರಾದ ಡಾ. ಪ್ರದೀಪ್ ಆರ್. ಭಂಡಾರಿ, ಹಾಗೂ ಶ್ರೀಮತಿ ಪವಿತ್ರ ವಿ., ಎನ್‌ಎಸ್‌ಎಸ್ ಘಟಕದ ಸ್ವಯಂಸೇವಕರು ಹಾಗೂ ಅರಣ್ಯ ಇಲಾಖೆಯ ಸಿಬ್ಬಂದಿಗಳು ಭಾಗವಹಿಸಿದ್ದರು.
ಕಾರ್ಯಕ್ರಮದ ಅಂಗವಾಗಿ ಪರಿಸರ ಸಂರಕ್ಷಣೆ, ಹಸಿರು ಪರಿಸರ ನಿರ್ಮಾಣ ಹಾಗೂ ಮರಗಳ ಮಹತ್ವದ ಕುರಿತು ವಿದ್ಯಾರ್ಥಿಗಳಿಗೆ ಅರಿವು ಮೂಡಿಸಲಾಯಿತು. ಗಣ್ಯರು ಹಾಗೂ ಎನ್‌ಎಸ್‌ಎಸ್ ಸ್ವಯಂಸೇವಕರು ಕಾಲೇಜು ಆವರಣದಲ್ಲಿ ವಿವಿಧ ಗಿಡಗಳನ್ನು ನೆಟ್ಟು ಅವುಗಳ ಸಂರಕ್ಷಣೆಯ ಮಹತ್ವವನ್ನು ತಿಳಿಸಿದರು. ಅರಣ್ಯ ಇಲಾಖೆಯ ವತಿಯಿಂದ ಗಿಡಗಳನ್ನು ವಿತರಿಸಲಾಯಿತು.
“ಒಂದು ಗಿಡ – ಒಂದು ಜೀವ, ಹಸಿರು ಪರಿಸರವೇ ನಮ್ಮ ಭವಿಷ್ಯ” ಎಂಬ ಸಂದೇಶದೊಂದಿಗೆ ನಡೆದ ಈ ಕಾರ್ಯಕ್ರಮವು ವಿದ್ಯಾರ್ಥಿಗಳಲ್ಲಿ ಪರಿಸರ ಪ್ರಜ್ಞೆಯನ್ನು ಬೆಳೆಸುವಲ್ಲಿ ಮಹತ್ವದ ಪಾತ್ರ ವಹಿಸಿತು. ಶಿಕ್ಷಕರ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸುವ ಜೊತೆಗೆ ಪ್ರಕೃತಿ ಸಂರಕ್ಷಣೆಯ ಮಹತ್ವವನ್ನು ಸಾರಿದ ಈ ಕಾರ್ಯಕ್ರಮ ಯಶಸ್ವಿಯಾಗಿ ನೆರವೇರಿತು.