ಪೊನ್ನಂಪೇಟೆ: ಶ್ರೀಮಂಗಲ-ನಾಲ್ಕೇರಿ ರಸ್ತೆ ಅಭಿವೃದ್ಧಿಗೆ ಭೂಮಿಪೂಜೆ
admincoorgdaily

ಪೊನ್ನಂಪೇಟೆ: ಪೊನ್ನಂಪೇಟೆ ತಾಲೂಕಿನ ಶ್ರೀಮಂಗಲ-ನಾಲ್ಕೇರಿ ಸಂಪರ್ಕ ರಸ್ತೆಯ 1 ಕೋಟಿ ರೂ. ವೆಚ್ಚದ ಅಭಿವೃದ್ಧಿ ಕಾಮಗಾರಿಗೆ ವಿರಾಜಪೇಟೆ ಶಾಸಕ ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಎ.ಎಸ್. ಪೊನ್ನಣ್ಣ ಭೂಮಿಪೂಜೆ ನೆರವೇರಿಸಿದರು.
ಈ ವೇಳೆ ಮಾತನಾಡಿದ ಶಾಸಕರು, ನಿತ್ಯ ನೂರಾರು ಜನರು ಹಾಗೂ ವಾಹನಗಳು ಸಂಚರಿಸುವ ಈ ರಸ್ತೆಯನ್ನು ಉತ್ತಮ ಗುಣಮಟ್ಟದಲ್ಲಿ ನಿರ್ಮಿಸಲಾಗುವುದು. ಸಾರ್ವಜನಿಕರಿಗೆ ಉತ್ತಮ ಸಂಚಾರ ವ್ಯವಸ್ಥೆ ಕಲ್ಪಿಸುವುದು ಸರ್ಕಾರದ ಉದ್ದೇಶ. ಕಾಮಗಾರಿ ಶೀಘ್ರದಲ್ಲೇ ಆರಂಭವಾಗಲಿದ್ದು, ಸಾರ್ವಜನಿಕರು ಸಹಕರಿಸಬೇಕು ಎಂದು ಮನವಿ ಮಾಡಿದರು.
ಕಾರ್ಯಕ್ರಮದಲ್ಲಿ ಬ್ಲಾಕ್ ಅಧ್ಯಕ್ಷ ಮಿದೇರಿರ ನವೀನ್, ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಕಾಳಿಮಡ ಪ್ರಶಾಂತ್, ಬಗರ್ ಹುಕುಂ ಅಧ್ಯಕ್ಷ ಅಣ್ಣಳ್ಳಮಡ ಲಾಲಾ ಅಪ್ಪಣ್ಣ, ವಿವಿಧ ವಲಯ ಅಧ್ಯಕ್ಷರುಗಳಾದ ತಿತೀರ ಕಟ್ಟಿ ಕಾರ್ಯಪ್ಪ, ತಿತೀರ ಪ್ರಭು, ಪಾಲ್ವಿನ್ ಪೂಣಚ್ಚ, ಚಿಮ್ಮಣ್ಣಮಾಡ ರವಿ, ಹಿರಿಯ ಮುಖಂಡ ಪಿ.ಕೆ. ಪೊನ್ನಪ್ಪ, ಡಿಸಿಸಿ ಸದಸ್ಯ ಪೆಮ್ಮಂಡ ರಾಜ ಸೇರಿದಂತೆ ಪಕ್ಷದ ಮುಖಂಡರು, ಕಾರ್ಯಕರ್ತರು ಉಪಸ್ಥಿತರಿದ್ದರು.