ಪೊನ್ನಂಪೇಟೆ: ಬಿಜೆಪಿ ಮುಖಂಡ ಬಿ.ಎಂ ಪ್ರಕಾಶ್ ಕಾಂಗ್ರೆಸ್ ಸೇರ್ಪಡೆ
admincoorgdaily

ಪೊನ್ನಂಪೇಟೆ:ಪೊನ್ನಂಪೇಟೆ ಭಾಗದ ಮಾಜಿ ಗ್ರಾಮ ಪಂಚಾಯತ್ ಸದಸ್ಯ, ಬಿಜೆಪಿಯ ಪ್ರಬಲ ಮುಖಂಡರಾಗಿ ಗುರುತಿಸಿಕೊಂಡಿದ್ದ ಬಿ.ಎಂ ಪ್ರಕಾಶ್ ಅವರು ಇಂದು ಅಧಿಕೃತವಾಗಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡರು.
ಶಾಸಕ ಎ.ಎಸ್ ಪೊನ್ನಣ್ಣ ಅವರ ಕಾರ್ಯವೈಖರಿ ಹಾಗೂ ಜನಪರ ಕಾಳಜಿಯನ್ನು ಮೆಚ್ಚಿ, ಕಾಂಗ್ರೆಸ್ ಸಿದ್ಧಾಂತ ಒಪ್ಪಿ ಪಕ್ಷ ಸೇರಿರುವುದಾಗಿ ತಿಳಿಸಿದರು.
ವಿರಾಜಪೇಟೆಯ ಶಾಸಕರ ಗೃಹ ಕಚೇರಿಯಲ್ಲಿ ನಡೆದ ಪಕ್ಷ ಸೇರ್ಪಡೆ ಕಾರ್ಯಕ್ರಮದಲ್ಲಿ ಶಾಸಕರು ಹಾಗೂ ಕೊಡಗು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎ.ಎಸ್ ಪೊನ್ನಣ್ಣ ಹಾಗೂ ಜಿಲ್ಲಾಧ್ಯಕ್ಷ ಧರ್ಮಜ ಉತ್ತಪ್ಪ ಸಮ್ಮುಖದಲ್ಲಿ ಕಾಂಗ್ರೆಸ್ ಧ್ವಜ ಹಿಡಿಯುವ ಮೂಲಕ ಪಕ್ಷಕ್ಕೆ ಸೇರ್ಪಡೆಯಾದರು.
ಈ ಸಂದರ್ಭದಲ್ಲಿ ಪೊನ್ನಂಪೇಟೆ ಬ್ಲಾಕ್ ಪ್ರಧಾನ ಕಾರ್ಯದರ್ಶಿ ಎ.ಜೆ ಬಾಬು, ಪ್ರಚಾರ ಸಮಿತಿ ಅಧ್ಯಕ್ಷ ಟಾಟು ಮೊಣಪ್ಪ, ವಿರಾಜಪೇಟೆ ಬ್ಲಾಕ್ ಅಧ್ಯಕ್ಷ ಪಟ್ಟಡ ರಂಜಿ ಪೂಣಚ್ಚ, ನಗರ ಅಧ್ಯಕ್ಷ ಮಾಳೆಟೀರ ಬೋಪಣ್ಣ, ಮುಖಂಡರಾದ ಕೊಲ್ಲಿರ ಬೋಪಣ್ಣ, ವಿಟಿ ವಾಸು, ಅಜ್ಜಿಕುಟ್ಟಿರ ಗಿರೀಶ್, ಕುಂಡಚ್ಚಿರ ಮಂಜು ದೇವಯ್ಯ, ರಾಜಶೇಖರ್, ನಾಯಂದಿರ ಶಿವಾಜಿ, ಮಾಲತಿ, ಮಹಮ್ಮದ್ ಆಲಿ, ರಾಜೇಶ್ ನಾಯರ್, ಕೇಟೋಳಿ ಮೋಹನ್ ರಾಜ್, ಉದಯ ಮಾದಪ್ಪ, ಸಿರಾಜ್ ಸೇರಿದಂತೆ ಪಕ್ಷದ ಮುಖಂಡರು, ಕಾರ್ಯಕರ್ತರು ಉಪಸ್ಥಿತರಿದ್ದರು.