ಪೊನ್ನಂಪೇಟೆ: ಶಾಲೆ ಸಮುದಾಯದತ್ತ ಕಾರ್ಯಕ್ರಮಕ್ಕೆ ಚಾಲನೆ
admincoorgdaily

ಪೊನ್ನಂಪೇಟೆ: ಪೋಷಕರು ಮಕ್ಕಳ ಕಲಿಕೆಯ ಬಗ್ಗೆ ನಿರಂತರ ಗಮನಹರಿಸುವುದರೊಂದಿಗೆ ಶಾಲೆಯ ಅಭಿವೃದ್ಧಿಗೂ ಕೈಜೋಡಿಸಬೇಕು ಎಂದು ಎಸ್ಡಿಎಂಸಿ ಉಪಾಧ್ಯಕ್ಷೆ ನಾಗವೇಣಿ ತಿಳಿಸಿದರು.
ಇಲ್ಲಿನ ಕರ್ನಾಟಕ ಪಬ್ಲಿಕ್ ಶಾಲೆಯ ಪ್ರಾಥಮಿಕ ವಿಭಾಗದಲ್ಲಿ ನಡೆದ 2026-27ನೇ ಸಾಲಿನ ಮೊದಲ ಶಾಲಾ ಸಮುದಾಯದತ್ತ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಶಾಲೆಯಲ್ಲಿ ಶಿಸ್ತುಬದ್ಧವಾಗಿ ಕಲಿಕಾ ಚಟುವಟಿಕೆಗಳು ನಡೆಯುತ್ತಿದ್ದು, ನುರಿತ ಶಿಕ್ಷಕರ ಮಾರ್ಗದರ್ಶನದಲ್ಲಿ ಮಕ್ಕಳು ಉತ್ತಮವಾಗಿ ಕಲಿಯುತ್ತಿದ್ದಾರೆ ಎಂದರು.
ಸಭೆಯಲ್ಲಿ ಪೋಷಕರು ಮಕ್ಕಳ ಕಲಿಕೆಯ ಪ್ರಗತಿ ಕುರಿತು ಶಿಕ್ಷಕರೊಂದಿಗೆ ಚರ್ಚಿಸಿ ಸಲಹೆಗಳನ್ನು ನೀಡಿದರು.
ಮುಖ್ಯ ಶಿಕ್ಷಕ ಬಿ.ಎಂ. ವಿಜಯ್ ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು. ದೈಹಿಕ ಶಿಕ್ಷಣ ಶಿಕ್ಷಕ ಮಹೇಶ್ ಟಿ.ಎಸ್. ನಿರೂಪಿಸಿದರು. ದಾಕ್ಷಾಯಣಿ ಎಸ್.ಎಸ್. ವಂದಿಸಿದರು.
ಕಾರ್ಯಕ್ರಮದಲ್ಲಿ ಶಿಕ್ಷಕಿಯರಾದ ವಿನಿತಾ ಕೆ.ಆರ್., ಅನಿತಾ, ನಳಿನಿ, ಪ್ರಿಯಾ, ಸಹ ಶಿಕ್ಷಕರು,ಹಳೆ ವಿದ್ಯಾರ್ಥಿ ಸಂಘದ ಕಾರ್ಯದರ್ಶಿ ಕೆ.ವಿ. ರಾಮಕೃಷ್ಣ, ಎಸ್ ಡಿ ಎಂ ಸಿ ಸದಸ್ಯರಾದ ಮಂಜುನಾಥ, ಕನ್ಯಾಕುಮಾರಿ, ಪ್ರಮೀಳಾ, ಕಾವ್ಯ, ಕಾವೇರಿ, ಶಿಲ್ಪ, ಗೀತಾ, ಶಿವ ಹಾಗೂ ಪೋಷಕರು ಭಾಗವಹಿಸಿದ್ದರು.