Kodagu

ಪೊನ್ನಂಪೇಟೆ:ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆ

admincoorgdaily

ಪೊನ್ನಂಪೇಟೆ:ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆ
ಪೊನ್ನಂಪೇಟೆ;ಪೊನ್ನಂಪೇಟೆ ತಾಲೂಕು ನಿಟ್ಟೂರು ಭಾಗದ 15ಕ್ಕೂ ಹೆಚ್ಚು ಜನ ಕಾರ್ಯಕರ್ತರು ಹಾಗೂ ಮುಖಂಡರು ಬಿಜೆಪಿ ಪಕ್ಷ ತೊರೆದು ಶಾಸಕರು ಹಾಗೂ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಅಜ್ಜಿಕುಟ್ಟಿರ ಎಸ್. ಪೊನ್ನಣ್ಣ ಅವರ ಕಾರ್ಯವೈಖರಿಯನ್ನು ಮೆಚ್ಚಿ, ಶಾಸಕರ ನೇತೃತ್ವದಲ್ಲಿ ಕಾಂಗ್ರೆಸ್ ಪಕ್ಷ ಸೇರ್ಪಡೆಗೊಂಡರು.

ಶಾಸಕರ ನಿರಂತರ ಅಭಿವೃದ್ಧಿ ಹಾಗೂ ಜನಪರ ಚಿಂತನೆಯಿಂದ ಅನೇಕ ಕಾಮಗಾರಿಗಳು ನಡೆಯುತ್ತಿರುವುದನ್ನು ಗಮನಿಸಿ ಅವರಿಗೆ ಮತ್ತಷ್ಟು ಬಲ ನೀಡಲು ಕಾಂಗ್ರೆಸ್ ಪಕ್ಷ ಸೇರುತ್ತಿರುವುದಾಗಿ ಬಿಜೆಪಿ ತೊರೆದ ಪ್ರಮುಖರು ತಿಳಿಸಿದರು.

ಈ ಸಂದರ್ಭದಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ತಿತೀರ ಧರ್ಮಜ ಉತ್ತಪ್ಪ, ಬ್ಲಾಕ್ ಅಧ್ಯಕ್ಷ ಮಿದೇರಿರ ನವೀನ್, ವಲಯ ಅಧ್ಯಕ್ಷ ಪವನ್ ಚಿಟ್ಟಿಯಪ್ಪ, ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಕಾಳಿಮಾಡ ಪ್ರಶಾಂತ್, ತಾಲೂಕು ಬಗರ್ ಹುಕುಂ ಅಧ್ಯಕ್ಷ ಅಣ್ಣಳ್ಳಮಾಡ ಲಾಲಾ ಅಪ್ಪಣ್ಣ, ಹುದಿಕೇರಿ ವಲಯ ಅಧ್ಯಕ್ಷ ಚಂಗುಲಂಡ ಸೂರಜ್, ಟಿ. ಶೆಟ್ಟಿಗೇರಿ ವಲಯ ಅಧ್ಯಕ್ಷ ತಿತೀರ ಪ್ರಭು, ಮಾಜಿ ಜಿಲ್ಲಾ ಪಂಚಾಯತ್ ಸದಸ್ಯ ಕೆ.ಎಂ. ಬಾಲಕೃಷ್ಣ, ಮುಕಟೀರ ಸಂದೀಪ್, ಪಕ್ಷದ ಮುಖಂಡರಾದ ಅಪ್ಪಚಂಗಡ ಮೋಟಯ್ಯ, ಬುಟ್ಟಿಯಂಡ ತಂಬಿ, ಚೊಟ್ಟೆಯಂಡಮಾಡ ಉದಯ, ತಿತೀರ ಚೋಂದಮ್ಮ, ಯುವ ಕಾಂಗ್ರೆಸ್ ಅಧ್ಯಕ್ಷ ಜಮ್ಮಡ ಸೋಮಣ್ಣ, ಕುಂಡಚ್ಚಿರ ಮಂಜು ದೇವಯ್ಯ, ಭವಿನ್ ಕುಶಾಲಪ್ಪ, ಫಾರ್ದಿನ್, ಪಕ್ಷದ ಕಾರ್ಯಕರ್ತರು ಹಾಗೂ ಸ್ಥಳೀಯ ಪ್ರಮುಖರು ಉಪಸ್ಥಿತರಿದ್ದರು.