Kodagu

ನಾಪೋಕ್ಲು ;ಇಂದಿರಾನಗರ ಅಂಗನವಾಡಿ ಕೇಂದ್ರದಲ್ಲಿ ಯಶಸ್ವಿಯಾಗಿ ನಡೆದ ಪೋಷಣ್ ಮಾಸಾಚರಣೆ ಕಾರ್ಯಕ್ರಮ

admincoorgdaily

ನಾಪೋಕ್ಲು ;ಇಂದಿರಾನಗರ ಅಂಗನವಾಡಿ ಕೇಂದ್ರದಲ್ಲಿ ಯಶಸ್ವಿಯಾಗಿ ನಡೆದ ಪೋಷಣ್ ಮಾಸಾಚರಣೆ ಕಾರ್ಯಕ್ರಮ
ವರದಿ :ಝಕರಿಯ ನಾಪೋಕ್ಲು 

ನಾಪೋಕ್ಲು :ಮಡಿಕೇರಿ ತಾಲೂಕಿನ ನಾಪೋಕ್ಲು ವೃತ್ತದ ಬೇತು  ಹಾಗೂ ಇಂದಿರಾನಗರ ಅಂಗನವಾಡಿ ಕೇಂದ್ರದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಆರೋಗ್ಯ ಇಲಾಖೆಯ ಸಹಕಾರದೊಂದಿಗೆ ಪೋಷಣ್ ಮಾಸಾಚರಣೆ  ಕಾರ್ಯಕ್ರಮ ನಡೆಯಿತು.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ನಾಪೋಕ್ಲು ವೃತ್ತದ ಮೇಲ್ವಿಚಾರಕಿ ಶೀಲಾ ಅಶೋಕ್,ನಾಪೋಕ್ಲು ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷೆ ವನಜಾಕ್ಷಿ ರೇಣುಕೇಶ್ ಹಾಗೂ ಅಂಗನವಾಡಿ ಕಾರ್ಯಕರ್ತೆ ಆಶಾ ಅಪ್ಪಣ್ಣ ಅವರು ದೀಪ ಬೆಳಗಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ಕಾರ್ಯಕ್ರಮದಲ್ಲಿ ನಾಪೋಕ್ಲು ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷೆ ವನಜಾಕ್ಷಿ ರೇಣುಕೇಶ್ ಮಾತನಾಡಿ ಮಹಿಳೆಯರು ಮತ್ತು ಮಕ್ಕಳ ಆರೋಗ್ಯ ರಕ್ಷಣೆಗೆ ಇಲಾಖೆಯಿಂದ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದೆ. ಸಾರ್ವಜನಿಕರು ಇಂತಹ ಕಾರ್ಯಕ್ರಮಗಳ ಸದುಪಯೋಗವನ್ನು ಪಡೆದುಕೊಳ್ಳಬೇಕು ಎಂದು ತಿಳಿಸಿದರು.

ಮೇಲ್ವಿಚಾರಕಿ ಶೀಲಾ ಅಶೋಕ್ ಮಾತನಾಡಿ ಸ್ಥಳೀಯವಾಗಿ ದೊರೆಯುವ ಹಣ್ಣು ಮತ್ತು ತರಕಾರಿಗಳನ್ನು ಪ್ರತಿನಿತ್ಯ ಆಹಾರದಲ್ಲಿ ಬಳಸುವಂತೆ ಸಲಹೆ ನೀಡಿದರು. ಇಲಾಖೆಯಿಂದ ದೊರೆಯುವ ವಿವಿಧ ಸೌಲಭ್ಯಗಳ ಕುರಿತು ಮಾಹಿತಿ ನೀಡಿದ ಅವರು ಗೃಹಲಕ್ಷ್ಮಿ ಯೋಜನೆಯ ಮರುಪರಿಶೀಲನೆ ಬಗ್ಗೆ ವಿವರಿಸಿದರು.

ಕಾರ್ಯಕ್ರಮದಲ್ಲಿ ಅಂಗನವಾಡಿ ಕಾರ್ಯಕರ್ತೆಯರು ತಯಾರಿಸಿದ ವಿವಿಧ ಬಗೆಯ ಪೌಷ್ಟಿಕ ಆಹಾರಗಳ ಪದಾರ್ಥಗಳ ಪ್ರದರ್ಶನ ನಡೆಸಾಲಯಿತು.

ಈಸಂದರ್ಭ ಕಾರ್ಯಕ್ರಮದಲ್ಲಿ ನಾಪೋಕ್ಲು ವೃತ್ತದ ಎಲ್ಲಾ ಅಂಗನವಾಡಿ ಕಾರ್ಯಕರ್ತೆಯರು, ಗರ್ಭಿಣಿಯರು, ಬಾಣಂತಿಯರು,ಆಶಾ ಕಾರ್ಯಕರ್ತೆಯರು, ಪೋಷಕರು, ಮಕ್ಕಳು ಹಾಗೂ ಅಂಗನವಾಡಿ ಸಹಾಯಕಿಯರು ಹಾಜರಿದ್ದರು.