Kodagu

ನ.03 ರಂದು ವಿದ್ಯುತ್ ವ್ಯತ್ಯಯ

admincoorgdaily

ನ.03 ರಂದು ವಿದ್ಯುತ್ ವ್ಯತ್ಯಯ
ಮಡಿಕೇರಿ:-ಗೋಣಿಕೊಪ್ಪ ವಿದ್ಯುತ್ ವಿತರಣಾ ಉಪ ಕೇಂದ್ರದಿಂದ ಹೊರಹೊಮ್ಮುವ ಎಫ್1 ನಲ್ಲೂರು, ಎಫ್2 ಬಾಳಲೆ ಮತ್ತು ಎಫ್16 ದೇವನೂರು ಫೀಡರ್‍ನಲ್ಲಿ ತುರ್ತು ನಿರ್ವಹಣಾ ಕಾಮಗಾರಿ ನಡೆಸಬೇಕಿರುವುದರಿಂದ ನವೆಂಬರ್, 03 ರಂದು ಬೆಳಗ್ಗೆ 10 ರಿಂದ 5.30 ಗಂಟೆಯವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದ್ದು, ಈ ಮಾರ್ಗದಿಂದ ವಿದ್ಯುತ್ ಸರಬರಾಜಾಗುವ ನಲ್ಲೂರು, ಬೆಸಗೂರು, ಪೊನ್ನಪ್ಪಸಂತೆ, ಸುಳುಗೋಡು, ಬಾಳೆಲೆ, ಬಿಳೂರು, ಕೊಟ್ಟಗೇರಿ, ನಿಟ್ಟೂರು, ಜಾಗಲೆ, ದೇವನೂರು, ಮಲ್ಲೂರು, ರಾಜಾಪುರ, ಕಿಸ್ತೂರು, ಮಳಲುಕೋಟೆ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಚಾವಿಸನಿನಿ ಕಾರ್ಯ ಮತ್ತು ಪಾಲನೆ ವಿಭಾಗದ ಕಾರ್ಯನಿರ್ವಾಹಕ ಎಂಜಿನಿಯರ್ ಅವರು ಕೋರಿದ್ದಾರೆ. 

ಹಾಗೆಯೇ 66/33/11 ಕೆವಿ ಎಂಯುಎಸ್‍ಎಸ್ ಮಗ್ಗುಲ ವಿದ್ಯುತ್ ವಿತರಣಾ ಉಪ ಕೇಂದ್ರದಿಂದ ಹೊರಹೊಮ್ಮುವ ಬಿ.ಶೆಟ್ಟಿಗೇರಿ ಮಾರ್ಗದ ಫೀಡರ್‍ನ ಕೇಬಲ್ ದುರಸ್ತಿ ಕಾಮಗಾರಿ ನಡೆಸಬೇಕಿರುವುದರಿಂದ ನವೆಂಬರ್, 03 ರಂದು ಬೆಳಗ್ಗೆ 9.30 ರಿಂದ 5 ಗಂಟೆಯವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದ್ದು, ಈ ಮಾರ್ಗದರ್ಶಿ ವಿದ್ಯುತ್ ಸರಬರಾಜಾಗುವ ವಿರಾಜಪೇಟೆ ಪಟ್ಟಣ, ಬಿಟ್ಟಂಗಾಲ, ಬಿ.ಶೆಟ್ಟಿಗೇರಿ, ಆರ್ಜಿ, ಬೇಟೋಳಿ, ಕದನೂರು, ಕೆದಮುಳ್ಳೂರು, ಕಾಕೋಟುಪರಂಬು ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಚಾವಿಸನಿನಿ ಕಾರ್ಯ ಮತ್ತು ಪಾಲನೆ ವಿಭಾಗದ ಕಾರ್ಯನಿರ್ವಾಹಕ ಎಂಜಿನಿಯರ್ ಅವರು ಕೋರಿದ್ದಾರೆ.

ಕೊಡ್ಲಿಪೇಟೆ ಶಾಖಾ ವ್ಯಾಪ್ತಿಯ ಎಫ್2 ಕೊಡ್ಲಿಪೇಟೆ ಮಾರ್ಗದಲ್ಲಿ ಫೀಡರ್ ನಿರ್ವಹಣಾ ಕಾಮಗಾರಿ ನಡೆಸಬೇಕಿರುವುದರಿಂದ  ನವೆಂಬರ್, 03 ರಂದು ಬೆಳಗ್ಗೆ 10 ರಿಂದ 5 ಗಂಟೆಯವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದ್ದು, ಈ ಮಾರ್ಗದಿಂದ ವಿದ್ಯುತ್ ಸರಬರಾಜಾಗುವ ಅವರದಾಳು, ಬ್ಯಾಡಗೊಟ್ಟ, ದೊಡ್ಡಕುಂದ, ಚಿಕ್ಕಕುಂದ, ನೀರಗುಂದ, ಬೆಸೂರು, ದೊಡ್ಡಭಂಡಾರ, ಕಟ್ಟೆಪುರ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ.

 ಸಾರ್ವಜನಿಕರು ಸಹಕರಿಸುವಂತೆ ಚಾವಿಸನಿನಿ ಕಾರ್ಯ ಮತ್ತು ಪಾಲನೆ ವಿಭಾಗದ ಕಾರ್ಯನಿರ್ವಾಹಕ ಎಂಜಿನಿಯರ್ ಅವರು ಕೋರಿದ್ದಾರೆ.