ನ.07 ರಂದು ವಿದ್ಯುತ್ ವ್ಯತ್ಯಯ
admincoorgdaily
ಮಡಿಕೇರಿ:-ಸೋಮವಾರಪೇಟೆ ವಿದ್ಯುತ್ ವಿತರಣಾ ಉಪಕೇಂದ್ರದಿಂದ ಹೊರಹೊಮ್ಮುವ ಎಫ್2 ಶಾಂತಳ್ಳಿ ಫೀಡರ್ ಮಾರ್ಗದಲ್ಲಿ ಫೀಡರ್ ನಿರ್ವಹಣಾ ಕಾಮಗಾರಿ ನಡೆಸಬೇಕಿರುವುದರಿಂದ ನವೆಂಬರ್, 07 ರಂದು ಬೆಳಗ್ಗೆ 10 ರಿಂದ 05 ಗಂಟೆಯವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದ್ದು, ಈ ಮಾರ್ಗದಿಂದ ವಿದ್ಯುತ್ ಸರಬರಾಜಾಗುವ ಶಾಂತಳ್ಳಿ, ಬೆಟ್ಟದಳ್ಳಿ, ಬೀದಳ್ಳಿ, ಕುಂದಳ್ಳಿ, ಕುಡಿಗಾಣ, ಕೊತ್ನಳ್ಳಿ, ತೋಳೂರು ಶೆಟ್ಟಳ್ಳಿ, ತಾಕೇರಿ, ಕೂತಿ, ಹೊಸಬೀಡು, ನಗರಳ್ಳಿ, ಹೆಗ್ಗಡಮನೆ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಚಾವಿಸನಿನಿ ಕಾರ್ಯ ಮತ್ತು ಪಾಲನೆ ವಿಭಾಗದ ಕಾರ್ಯನಿರ್ವಾಹಕ ಎಂಜಿನಿಯರ್ ಅವರು ಕೋರಿದ್ದಾರೆ.