Kodagu

ಜಿಲ್ಲಾ ಮಟ್ಟದ ಬಾಲಕರ ಬಾಸ್ಕೆಟ್‌ಬಾಲ್‌ನಲ್ಲಿ ಪ್ರಗತಿ ಶಾಲೆ ಚಾಂಪಿಯನ್ :ವಿಭಾಗ ಮಟ್ಟಕ್ಕೆ ಆಯ್ಕೆ

admincoorgdaily

ಜಿಲ್ಲಾ ಮಟ್ಟದ ಬಾಲಕರ ಬಾಸ್ಕೆಟ್‌ಬಾಲ್‌ನಲ್ಲಿ ಪ್ರಗತಿ ಶಾಲೆ ಚಾಂಪಿಯನ್ :ವಿಭಾಗ ಮಟ್ಟಕ್ಕೆ ಆಯ್ಕೆ
ಮಡಿಕೇರಿ: ಜಿಲ್ಲಾ ಮಟ್ಟದ ಪ್ರಾಥಮಿಕ ಬಾಲಕರ ಬಾಸ್ಕೆಟ್‌ಬಾಲ್‌ನಲ್ಲಿ ವಿರಾಜಪೇಟೆಯ ಪ್ರಗತಿ ಶಾಲೆಯ ಅಂಡರ್-14 ಬಾಲಕರ ತಂಡ ಜಿಲ್ಲಾ ಚಾಂಪಿಯನ್ ಆಗಿ ಹೊರಹೊಮ್ಮಿದೆ.
ಜಿಲ್ಲಾ ಮಟ್ಟದಲ್ಲಿ ಪ್ರಥಮ ಸ್ಥಾನ ಪಡೆದಿರುವ ಪ್ರಗತಿ ಶಾಲೆಯ ತಂಡ ಇದೀಗ ವಿಭಾಗೀಯ ಮಟ್ಟದ ಚಾಂಪಿಯನ್‌ಶಿಪ್‌ಗೆ ಅರ್ಹತೆ ಪಡೆದಿದೆ.
ಶಾಲೆಯ ಮುಖ್ಯಸ್ಥ ಮಾದಂಡ ತಿಮ್ಮಯ್ಯ ಅವರು ತರಬೇತುದಾರರು ಹಾಗೂ ವಿದ್ಯಾರ್ಥಿಗಳಿಗೆ ಅಭಿನಂದನೆ ಸಲ್ಲಿಸಿದ್ದಾರೆ.