Kodagu

ಅಪಘಾತದಲ್ಲಿ ಮೃತಪಟ್ಟವರ ಕುಟುಂಬಗಳಿಗೆ ಪ್ರಸನ್ನ ಎಡಿಕೇರಿ ಸಾಂತ್ವನ

admincoorgdaily

ಅಪಘಾತದಲ್ಲಿ ಮೃತಪಟ್ಟವರ ಕುಟುಂಬಗಳಿಗೆ ಪ್ರಸನ್ನ ಎಡಿಕೇರಿ ಸಾಂತ್ವನ
1002526836.jpg


ಕುಶಾಲನಗರ: ಕೊಡಗು ಜಿಲ್ಲೆಯ ಕುಶಾಲನಗರ ಸಮೀಪ ರಾಷ್ಟ್ರೀಯ ಹೆದ್ದಾರಿ 275ರ ಆನೆಕಾಡು ಬಳಿ ಕಳೆದ ಭಾನುವಾರ ಸಂಜೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ  ಮೃತಪಟ್ಟವರ ಮನೆಗಳಿಗೆ ಉದ್ಯಮಿ, ಸಮಾಜ ಸೇವಕ ಹಾಗೂ ಬಿಜೆಪಿ ಯುವ ನಾಯಕ ಪ್ರಸನ್ನ ಎಡಿಕೇರಿ ಭೇಟಿ ನೀಡಿ, ಮೃತರ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು.

ಅಪಘಾತದ ಸುದ್ದಿ ತಿಳಿದು ಕುಟುಂಬಗಳನ್ನು ಭೇಟಿ ಮಾಡಿದ ಅವರು, ಮೃತರ ಕುಟುಂಬಸ್ಥರ ನೋವು ಹಾಗೂ ದುಃಖವನ್ನು ಆಲಿಸಿ, ಈ ಕಠಿಣ ಸಂದರ್ಭದಲ್ಲಿ ಧೈರ್ಯದಿಂದ ಇರುವಂತೆ ಆತ್ಮಸ್ಥೈರ್ಯ ತುಂಬಿದರು.

ಈ ವೇಳೆ ಮಾತನಾಡಿದ ಪ್ರಸನ್ನ ಎಡಿಕೇರಿ, ಅಪಘಾತದಲ್ಲಿ ಅಮೂಲ್ಯ ಜೀವಗಳು ಕಳೆದುಕೊಂಡಿರುವುದು ಅತ್ಯಂತ ನೋವಿನ ಸಂಗತಿ. ಮೃತರ ಕುಟುಂಬಗಳ ದುಃಖದಲ್ಲಿ ತಾನೂ ಭಾಗಿಯಾಗಿದ್ದು, ಅವರ ನೋವನ್ನು ಹಂಚಿಕೊಳ್ಳುವ ಸಣ್ಣ ಪ್ರಯತ್ನ ಮಾಡಿದ್ದೇನೆ. ಈ ಸಂಕಷ್ಟದ ಸಂದರ್ಭದಲ್ಲಿ ಕುಟುಂಬಸ್ಥರಿಗೆ ಧೈರ್ಯ ಹಾಗೂ ಆತ್ಮಸ್ಥೈರ್ಯವನ್ನು ಭಗವಂತ ನೀಡಲೆಂದರು.

ಅಪಘಾತದಲ್ಲಿ ಗಾಯಗೊಂಡಿರುವವರು ಶೀಘ್ರವಾಗಿ ಚೇತರಿಸಿಕೊಂಡು ಆರೋಗ್ಯದಿಂದ ಮನೆಗೆ ಮರಳಲಿ. ಮೃತರ ಕುಟುಂಬಗಳಿಗೆ ಈ ನೋವನ್ನು ಭರಿಸುವ ಶಕ್ತಿಯನ್ನು ಭಗವಂತ ಕರುಣಿಸಲಿ ಎಂದು ಅವರು ಪ್ರಾರ್ಥಿಸಿದರು.

ಮೃತರ ಕುಟುಂಬಸ್ಥರನ್ನು ಖುದ್ದಾಗಿ ಭೇಟಿ ಮಾಡಿ ಸಾಂತ್ವನ ಹೇಳಿದ ಪ್ರಸನ್ನ ಎಡಿಕೇರಿ ಅವರ ಮಾನವೀಯ ನಡೆ ಸ್ಥಳೀಯರ ಗಮನ ಸೆಳೆಯುತ್ತಿದೆ.