ಜೆಡಿಎಸ್ ಜಿಲ್ಲಾಧ್ಯಕ್ಷರಾಗಿ ಸೋಮವಾರಪೇಟೆಯ ಪ್ರವೀಣ್ ಆಯ್ಕೆ
admincoorgdaily


ಸೋಮವಾರಪೇಟೆ: ಕೊಡಗು ಜಿಲ್ಲಾ ಜೆಡಿಎಸ್ ಅಧ್ಯಕ್ಷರಾಗಿ ಸೋಮವಾರಪೇಟೆಯ ಪ್ರವೀಣ್ ಅವರು ಆಯ್ಕೆಯಾಗಿದ್ದಾರೆ.
ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಹಾಗೂ ಮಾಜಿ ಸಚಿವ ಸಾ.ರಾ. ಮಹೇಶ್ ಅವರ ಸಮ್ಮುಖದಲ್ಲಿ ನಡೆದ ಸಭೆಯಲ್ಲಿ ಸರ್ವಾನುಮತದಿಂದ ಸೋಮವಾರಪೇಟೆಯ ಪ್ರವೀಣ್ ಅವರನ್ನು ಜಿಲ್ಲಾಧ್ಯಕ್ಷರಾಗಿ ಆಯ್ಕೆ ಮಾಡಲಾಯಿತು.
ಈ ಸಂದರ್ಭದಲ್ಲಿ ಮಾತನಾಡಿದ ಕುಮಾರಸ್ವಾಮಿ ಅವರು, ಮುಂಬರುವ ಜಿಲ್ಲಾ ಪಂಚಾಯಿತಿ, ತಾಲೂಕು ಪಂಚಾಯಿತಿ ಚುನಾವಣೆಯಲ್ಲಿ ಪಕ್ಷವನ್ನು ಬಲಪಡಿಸಲು ಎಲ್ಲರೂ ಒಗ್ಗಟ್ಟಿನಿಂದ ಕೆಲಸ ಮಾಡಬೇಕು. ಜಿಲ್ಲೆಯಲ್ಲಿ ಜೆಡಿಎಸ್‌ಗೆ ಮತ್ತೆ ಶಕ್ತಿ ತುಂಬಲು ನೂತನ ಜಿಲ್ಲಾಧ್ಯಕ್ಷರು ಮುಂದಾಳತ್ವ ವಹಿಸಬೇಕು ಎಂದು ಸೂಚಿಸಿದರು.
ನೂತನ ಜಿಲ್ಲಾಧ್ಯಕ್ಷ ಸೋಮವಾರಪೇಟೆಯ ಪ್ರವೀಣ್ ಅವರಿಗೆ ಕುಮಾರಸ್ವಾಮಿ, ಸಾ.ರಾ. ಮಹೇಶ್ ಹಾಗೂ ಮುಖಂಡರು ಅಭಿನಂದನೆ ಸಲ್ಲಿಸಿದರು. ಸಭೆಯಲ್ಲಿ ಜೆಡಿಎಸ್ ಮುಖಂಡರು, ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು.